ಚಿಕ್ಕಮಗಳೂರು

ದರ್ಗಾ ಅಪವಿತ್ರ ಪ್ರಕರಣ: ಬಂಧನಕ್ಕೆ ಆಗ್ರಹ

Published On :

ಚಿಕ್ಕಮಗಳೂರು: ದರ್ಗಾ ಅಪವಿತ್ರ ಕೃತ್ಯದಲ್ಲಿ ಭಾಗಿಯಾಗಿರುವ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯನ್ನು ಗಡಿಪಾರು ಮಾಡಬೇಕೆಂದು ಜೆಡಿಎಸ್ ಮುಖಂಡ ಎಚ್.ಎಚ್. ದೇವರಾಜ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಕೃತ್ಯ ಎಸಗಿರುವ ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನಾಪತ್ತೆಯಾಗಿದ್ದಾರೆ. ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ಹೊಣೆ ಹೊರಬೇಕು:  ದರ್ಗಾ ಅಪವಿತ್ರ ಕೃತ್ಯದ ನಂತರ ನಡೆದ ಶಾಂತಿ ಸಭೆಯಲ್ಲಿ ಶಾಸಕ ಸಿ.ಟಿ.ರವಿ ಅವರು ತಾವು ಶಾಸಕರಾಗಿದ್ದ ಕಾಲದಲ್ಲಿ ಯಾವುದೇ ಕೋಮುಗಲಭೆ ನಡೆದಿಲ್ಲ. ಈ ಕೃತ್ಯ ಎಸಗಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದರು. ಇದೀಗ ಅವರದೇ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಪೊಲೀಸರ ತನಿಖೆ ವೇಳೆಯಲ್ಲಿ ತಿಳಿದುಬಂದಿದೆ. ಆದ್ದರಿಂದ ಬಿಜೆಪಿ, ಬಜರಂಗದಳ ಹಾಗೂ ಆರ್ಎಸ್ಎಸ್ ಈ ಕೃತ್ಯದ ಹೊಣೆ ಹೊರಬೇಕು ಎಂದು ಹೇಳಿದರು.
ಜೆಡಿಎಸ್ ಮುಖಂಡರಾದ ಜಮೀಲ್ ಅಹಮದ್, ಮುಕ್ತಿಯಾರ್ ಅಹಮದ್, ಕೆ. ಭರತ್, ಅಣ್ಣಪ್ಪ ಉಪಸ್ಥಿತರಿದ್ದರು.
ಬಂಧನಕ್ಕೆ ಒತ್ತಾಯ: ದರ್ಗಾ ಅಪವಿತ್ರಗೊಳಿಸಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಹಾಗೂ ಈ ಕೃತ್ಯದ ಹಿಂದಿರುವವರನ್ನು ಕೂಡಲೇ ಬಂಧಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಆಗ್ರಹಿಸಿದ್ದಾರೆ.
ಈ ಕೃತ್ಯ ಎಸಗಿರುವ ಇಬ್ಬರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ದರ್ಗಾ ಅಪವಿತ್ರಗೊಳಿಸಿರುವುದು ಅತ್ಯಂತ ಹೀನಾ ಕೃತ್ಯ. ಈ ಬಗ್ಗೆ ತನಿಖೆಯಾಗಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.