ಚಿಕ್ಕಮಗಳೂರು

ಸಂಸ್ಕೃತಿ, ಸಂಪ್ರದಾಯ ಮರೆಯಬೇಡಿ: ಕರುಣಾಕರನ್

Published On :

ಚಿಕ್ಕಮಗಳೂರು: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ಹಾಕುವ ಪ್ರತಿಭಾ ಕಾರಂಜಿ ಸೂಕ್ತವಾದ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಪಿ.ಬಿ. ಕರುಣಕರನ್ ಹೇಳಿದ್ದಾರೆ.
ನಗರದ  ಎಂ.ಇ.ಎಸ್. ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಆಧುನಿಕ ಜಗತ್ತಿನಲ್ಲಿ ಶಿಕ್ಷಣಕ್ಕೆ ತುಂಬ ಮಹತ್ವವನ್ನು ನೀಡಲಾಗುತ್ತಿದೆ ಇದರಿಂದಾಗಿ ದೇಶದಲ್ಲಿ ಶೈಕ್ಷಣಿಕ ಪ್ರಗತಿಯಾಗುತ್ತಿದೆ ಎಂದು ಅವರು, ಶಿಕ್ಷಣದ ಜೊತೆಗೆ ನಮ್ಮ ಕಲೆ, ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದು ಹೇಳಿದರು.
ಸೂಕ್ತ ವೇದಿಕೆ: ಜಿಪಂನ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಶೃಂಗೇರಿ ಶಿವಣ್ಣ ಮಾತನಾಡಿ, ಸರ್ಕಾರ ಎಲ್ಲಾ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು. ವಿದ್ಯೆ ಸಾಧಾಕರ ಸ್ವತ್ತು. ಸೋಮಾರಿಗಳ ಸ್ವತ್ತಲ್ಲ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಭಾಗ್ಯ ರಂಗನಾಥ್ ಮಾತನಾಡಿ, ಪ್ರತಿಯೊಬ್ಬ ಮಕ್ಕಳಲ್ಲಿ ಒಂದಲ್ಲ ಒಂದು ರೀತಿಯ ಕಲೆ ಅಡಗಿರುತ್ತದೆ. ಆ ಕಲೆಯನ್ನು ಹೊರ ತರಲು ಪ್ರತಿಭಾ ಕಾರಂಜಿಗಳಂತಹ ವೇದಿಕೆಗಳು ಉತ್ತಮವಾದವು, ಮಕ್ಕಳ ಪ್ರತಿಭೆಯನ್ನು ಇತರರಿಗೂ ತಿಳಿಸಿ ಅವರಲ್ಲಿರುವ ಕಲೆಯನ್ನು ಮತ್ತಷ್ಟು ಹೆಚ್ಚು ಬೆಳೆಸಿಕೊಳ್ಳಲು ಸಹಕಾರಿಗಳಾಗಬೇಕೆಂದರು. ಬಸವನಹಳ್ಳಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯರಾದ ಜೆ.ಡಿ. ಲೋಕೇಶ್, ಅನ್ನಪೂರ್ಣ ಚನ್ನಕೇಶವ, ಗೌರವ ಕಾರ್ಯದರ್ಶಿ ಡಾ. ವಿಜಯಕುಮಾರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಅಣ್ಣೆಗೌಡ, ವೆಂಕಟರಾಮ್, ದೇವರಾಜು, ಚಂದ್ರೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.