ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ
ಶೃಂಗೇರಿ: ಪಟ್ಟಣದ ಜೆಸಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಜೆಸಿಐ, ಜೇಸಿರೇಟ್ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೇಸಿರೇಟ್ ಅಧ್ಯಕ್ಷೆ ರೇಖಾ ಬಾಲಗಂಗಾಧರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವಿಕೆ ಮುಖ್ಯ. ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಜೆಸಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಂ. ಭಟ್, ಕೆ.ಸಿ. ಶಿವಕುಮಾರ್, ಮತ್ತಿತರರು ಉಪಸ್ಥಿತರಿದ್ದರು. ರಸಪ್ರಶ್ನೆಯಲ್ಲಿ ದರ್ಶಿನಿ ಪ್ರೌಢಶಾಲೆ ಪ್ರಥಮ, ತೊರೆಹಡ್ಲು ಸರ್ಕಾರಿ ಪ್ರೌಢಶಾಲೆ ದ್ವಿತೀಯ, ಪಟ್ಟಣದ ಶ್ರೀ ಅಭಿನವ ವಿದ್ಯಾತೀರ್ಥ ಪ್ರೌಢಶಾಲೆ ತೃತೀಯ ಸ್ಥಾನ ಪಡೆಯಿತು.
21ರಿಂದ ನಾಟಕ
ತರೀಕೆರೆ: ಶ್ರೀ ಶಿವಕುಮಾರ ಕಲಾಸಂಘ ಸಾಣೇಹಳ್ಳಿ ವತಿಯಿಂದ ಪಟ್ಟಣದ ಬಯಲು ರಂಗ ಮಂದಿರದಲ್ಲಿ ಸಂಜೆ 6 ಗಂಟೆಗೆ ಜ.21ರಿಂದ 24ರ ವರೆಗೆ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಮಾಜಿ ಶಾಸಕ ಡಿ.ಎಸ್. ಸುರೇಶ್ ತಿಳಿಸಿದ್ದಾರೆ. ಜ.21ರಂದು ಮಹಾಬೆಳಗು, 22ರಂದು ಶರಣಸತಿ- ಲಿಂಗಪತಿ, 23ರಂದು ವಿಶ್ವಬಂಧು ಮರುಳಸಿದ್ಧ, 24ರಂದು ತಲ್ಲಣಸದಿರು ಕಂಡ್ಯಾ ತಾಳು ಮನವೆ ಈ ನಾಲ್ಕು ನಾಟಕಗಳು ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

