ಸಚಿವರ ಪ್ರವಾಸ
ಚಿಕ್ಕಮಗಳೂರು: ಯುವಜನ ಸೇವಾ ಮತ್ತು ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ಸಹಕಾರ ಸಚಿವ ಎಚ್.ಎಸ್. ಮಹಾದೇವಪ್ರಸಾದ್ ಅವರು ಬುಧವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ತರೀಕೆರೆಯಲ್ಲಿ ಮುಖ್ಯಮಂತ್ರಿ ನೆರವೇರಿಸಲಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಡೂರಿನ ಎಪಿಎಂಸಿ ಆವರಣದಲ್ಲಿ ನಡೆಯಲಿರುವ ಗುರು ಸಿದ್ದರಾಮೇಶ್ವರರ 841ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಕಿಮ್ಮನೆ ರತ್ನಾಕರ್
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಬುಧವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಕಡೂರು ತಾಲೂಕಿನ ನಿಡಘಟ್ಟದಲ್ಲಿ ನಡೆಯಲಿರುವ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಮಲೆನಾಡು ಉತ್ಸವ
ಶೃಂಗೇರಿ: ಸಾಂಸ್ಕೃತಿಕ ಉತ್ಸವಗಳು ಆಧುನಿಕ ಕಾಲಪ್ರಹಾರದ ಪಲ್ಲಟಗಳ ತಡೆಗೋಡೆಗಳಾಗಿವೆ ಎಂದು ರಾಜ್ಯ ಅಫೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎರ್. ಮಂಜುನಾಥ ಗೌಡ ತಿಳಿಸಿದರು. ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ನಡೆಯುತ್ತಿರವ ಮಲೆನಾಡು ಉತ್ಸವದಲ್ಲಿ ಮಾತನಾಡಿದರು. ಪತ್ರಕರ್ತ ಎಂ.ಎಂ. ಪ್ರಭಾಕರ ಕಾರಂತ್, ಕೆ.ಎಂ. ರಮೇಶ್, ಮತ್ತಿತರರು ಉಪಸ್ಥಿತರಿದ್ದರು.ಬೇಗಾರು ರಮೇಶ್ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

