'ಮಲೆನಾಡ ಯಕ್ಷ ಕಲಾವಿದರನ್ನು ಗುರುತಿಸಿ'
ಶೃಂಗೇರಿ: ಯಕ್ಷರಂಗದಲ್ಲಿ ಮಲೆನಾಡಿನ ಯಕ್ಷಕಲಾವಿದರು ಮಹತ್ತರ ಪಾತ್ರವಹಿಸಿದ್ದು, ತಮ್ಮದೇ ರೀತಿಯಲ್ಲಿ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಇದುವರೆಗೂ ಇವರ ಸೇವೆಯನ್ನು ಪರಿಗಣಿಸಿ ಮುಖ್ಯವಾಹಿನಿಯಲ್ಲಿ ಗುರುತಿಸಿಲ್ಲ ಎಂದು ಯಕ್ಷಗಾನ ಕಲಾವಿದ ಬೇಗಾರು ಶಿವಕುಮಾರ್ ತಿಳಿಸಿದರು.
ಅವರು ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ನಡೆಯುತ್ತಿರುವ ಮಲೆನಾಡು ಉತ್ಸವದಲ್ಲಿ ಮಾತನಾಡಿ, ಯಕ್ಷರಂಗದಲ್ಲಿನ ಸೇವೆಯನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವ ಕೆಲಸ ನಡೆಯಬೇಕು ಎಂದರು.
ಇದೇ ಸಂದರ್ಭದಲ್ಲಿ ಯಕ್ಷ ಕಲಾವಿದ ಚಗತೆ ರಾಮದಾಸ್ ಅವರಿಗೆ ಎಲ್.ಜಿ. ಶಿವಕುಮಾರ್ ನೆನಪಿನ ರಂಗ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಶೈಲಜಾ ರತ್ನಾಕರ ಹೆಗ್ಡೆ, ಕಾನ ಶಿವಶಂಕರ್,ಬಿ.ಎಲ್. ರವಿಕುಮಾರ್, ಎ.ಎಸ್. ನಯನ, ವೀರಪ್ಪಗೌಡ ಮೊದಲಾದರು ಉಪಸ್ಥಿತರಿದ್ದರು. ಬೇಗಾರು ರಮೇಶ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

