ಚಿಕ್ಕಮಗಳೂರು

ಅಡಕೆ ನಿಷೇಧ: ಬಹಿರಂಗ ಚರ್ಚೆಗೆ ಬರಲಿ

Published On :

ಚಿಕ್ಕಮಗಳೂರು: ಕೇಂದ್ರ ಸರ್ಕಾರ ಅಡಕೆ ನಿಷೇಧ ಮಾಡಲು ಹೊರಟಿದೆ ಎಂದು ಹೇಳುವವರು ಬಹಿರಂಗ ಚರ್ಚೆಗೆ ಬರಬೇಕೆಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಕೇಂದ್ರ ಸರ್ಕಾರ ಅಡಿಕೆಯನ್ನು ನಿಷೇಧ ಮಾಡಲು ಹೊರಟಿದೆ ಎಂಬುದರ ಬಗ್ಗೆ ನಿಮ್ಮಲ್ಲಿ ದಾಖಲೆಗಳಿದ್ದರೆ ಚರ್ಚೆಗೆ ಬನ್ನಿ ಎಂದು ತರೀಕೆರೆಯಲ್ಲಿ ಬುಧವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡುವಾಗ ಅವರು ಸವಾಲು ಹಾಕಿದರು. ಗುಟ್ಕಾ ನಿಷೇಧ ಮಾಡಿದ ಸಂದರ್ಭದಲ್ಲಿ ಅಡಕೆ ಬೆಲೆ ಕುಸಿಯಲಿದೆ ಎಂಬ ಪ್ರಚಾರ ಮಾಡಿದ್ದರು. ಗುಟ್ಕಾ ನಿಷೇಧದ ವೇಳೆಯಲ್ಲಿ ಅಡಿಕೆಯ ಬಗ್ಗೆ ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಅದರನ್ವಯ ಹಿಂದಿನ ಸರ್ಕಾರ ವಿಜ್ಞಾನಿಗಳ ತಂಡವನ್ನು ರಚನೆ ಮಾಡಿತ್ತು. ಆ ತಂಡ ಸಂಶೋಧನೆ ನಡೆಸಿ ನೀಡಿರುವ ವರದಿಯಲ್ಲಿ ಎಲ್ಲೂ ಕೂಡ ಅಡಕೆ ವಿಷಕಾರಿಕ ವಸ್ತು, ಅದನ್ನು ನಿಷೇಧಿಸಬೇಕೆಂದು ಹೇಳಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.