ಕುಡಿವ ನೀರಿಗೆ ಹೆಚ್ಚುವರಿ ಹಣ ನೀಡಲು ಆಗ್ರಹ
ತರೀಕೆರೆ: ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ಹೆಚ್ಚುವರಿಯಾಗಿ 2500 ಲಕ್ಷ ಮಂಜೂರು ಮಾಡಬೇಕೆಂದು ಶಾಸಕ ಜಿ.ಎಚ್. ಶ್ರೀನಿವಾಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ.
ಬುಧವಾರ ತಾಲೂಕು ಅಡಳಿತ, ತಾಪಂ ವಿವಿಧ ಇಲಾಖೆಗಳ ವತಿಯಿಂದ ಪಟ್ಟಣದ ಬಯಲು ರಂಗಮಂದಿರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಅರ್ಪಿಸಿ ಮಾತನಾಡಿದರು.
ಪಟ್ಟಣಕ್ಕೆ ಭದ್ರಾ ಬಲದಂಡೆ ನಾಲೆಯಿಂದ ಮಾನಸಿಕೆರೆಗೆ ನೀರನ್ನು ಒದಗಿಸಲಾಗುತ್ತಿದೆ. ಆದರೆ, ಈ ಕೆರೆಯ ಸಾಮರ್ಥ್ಯ ಕಡಿಮೆ ಇದ್ದು, ಮೂರು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಅಲ್ಲದೆ, ಬೇಸಿಗೆಯಲ್ಲಿ ನೀರು ಇರುವುದಿಲ್ಲ. ಇದರ ಬದಲಾಗಿ ಹತ್ತಿರವೇ ಇರುವ ಭದ್ರಾ ಜಲಾಶಯದಿಂದ ಪೈಪ್ಲೈನ್ ಮೂಲಕ ನೀರನ್ನು ನೇರವಾಗಿ ತರೀಕೆರೆ ಪಟ್ಟಣದ ಶುದ್ಧೀಕರಣ ಘಟಕದ ಮೂಲಕ ಒದಗಿಸಿದಲ್ಲಿ 24 ಗಂಟೆ ಶುದ್ಧ ನೀರನ್ನು ಒದಗಿಸಬಹುದು ಎಂದು ತಿಳಿಸಿದರು.
ಪಾಲಿಟೆಕ್ನಿಕ್ ಕಾಲೇಜು: ತಾಲೂಕಿನ ವಿದ್ಯಾರ್ಥಿಗಳಿಗೆ ಸಹಾಯಕವಾಗುವ ತಾಂತ್ರಿಕ ತರಬೇತಿ ಸಂಸ್ಥೆ ಇಲ್ಲ. ತರೀಕೆರೆಗೆ ಒಂದು ಪಾಲಿಟೆಕ್ನಿಕ್ ಕಾಲೇಜನ್ನು ಮಂಜೂರು ಮಾಡಬೇಕು. ಲಕ್ಕವಳ್ಳಿ ಡ್ಯಾಂ ಸುತ್ತ ಉದ್ಯಾನ ಮತ್ತು ಸುಸಜ್ಜಿತ ಪ್ರವಾಸಿ ಮಂದಿರ ನಿರ್ಮಿಸಲು ಅನುದಾನ, ಸೋಂಪುರ ದೇವಾಲಯದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು ಮಾಡಬೇಕು. ಪಟ್ಟಣಕ್ಕೆ ಒಳಚರಂಡಿ ಯೋಜನೆ, ಹೊಸ ಸರ್ಕಾರಿ ಕಚೇರಿ ಕಟ್ಟಡ ನಿರ್ಮಾಣ, ವಾಲ್ಮೀಕಿ ಭವನ ಡಾ. ಅಂಬೇಡ್ಕರ್ ಭವನ, ದೇವರಾಜ ಅರಸು ಭವನ ನಿರ್ಮಾಣ ಮಾಡಲು ಮತ್ತು ತಾಲೂಕಿನ ಹಲವಾರು ಬೇಡಿಕೆಗಳನ್ನು ಮಂಜೂರು ಮಾಡಿಕೊಡಬೇಕೆಂದು ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

