ಚಿಕ್ಕಮಗಳೂರು

ಸಹೃದಯರಿಂದಾಗಿ ಸಂಸ್ಕೃತಿ ಉಳಿವು: ಸಚಿವ ಕಿಮ್ಮನೆ

Published On :

ಶೃಂಗೇರಿ: ಕಲೆ, ಕಲಾವಿದರನ್ನು ಸ್ಫೂರ್ತಿಗೊಳಿಸುವುದು ಸಹೃದಯರ ಪ್ರೀತಿ. ಸಾಂಸ್ಕೃತಿಕ ಸಂಘಟಕರಿಗೆ ಸಹೃದಯರು ಸಕಲ ರೀತಿಯ ಬೆಂಬಲಗಳನ್ನು ಸೂಚಿಸಿದಾಗ ನಮ್ಮ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದರು.
ಅವರು ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ಶ್ರೀ ಭಾರತೀ ತೀರ್ಥ ಸಾಂಸ್ಕೃತಿಕ ಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಡೆದ ಮಲೆನಾಡು ಉತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕೃಷಿಕ ಕಾಫಿತೋಟ ಮಲ್ಲಪ್ಪ ಹೆಗ್ಡೆಯವರಿಗೆ ಕಲ್ಕುಳಿ ದೇವೇಂದ್ರ ಹೆಗ್ಡೆ ಸ್ಮಾರಕ ಕೃಷಿ ಪ್ರಶಸ್ತಿ ಹಾಗೂ ಆದಿತ್ಯರಾವ್ ಅವರಿಗೆ ಯುವ ಪುರಸ್ಕಾರ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ ಮಾತನಾಡಿದರು. ಪಪಂ ಮಾಜಿ ಅಧ್ಯಕ್ಷ ಪರಾಶರ ಸಮಾರೋಪ ಭಾಷಣ ಮಾಡಿದರು. ಕಲ್ಕುಳಿ ಜಗದೀಶ್ ಹೆಗ್ಡೆ, ಸುಧಾಕರ ಶೆಟ್ಟಿ ಹೊನೇಕೇರಿ, ಎ.ಎಸ್. ನಯನ, ಜಿ.ಎಂ. ಭಟ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.