ಚಿಕ್ಕಮಗಳೂರು

ಇಂದು ಜಾತ್ರಾ ಮಹೋತ್ಸವ

Published On :

ತರೀಕೆರೆ: ಭದ್ರಗಿರಿ ಶಿವ ಸುಬ್ರಮಣ್ಯ ಸ್ವಾಮಿ ಸೇವಾ ಸಮಿತಿ ಹಾಗೂ ಭಕ್ತಾದಿಗಳ ವತಿಯಿಂದ ಸಮೀಪದ ಎಂ.ಸಿ. ಹಳ್ಳಿಯ ಹತ್ತಿರ ಭದ್ರಗಿರಿ ಶಿವ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ಜ.17ರಂದು ಜಾತ್ರಾ ಮಹೋತ್ಸವ ನಡೆಯಲಿದೆ.
ಈದ್ ಮಿಲಾದ್ ಪ್ರಯುಕ್ತ ಪ್ರವಚನ
ಕೊಪ್ಪ: ತಾಲೂಕಿನ ಜಯಪುರ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸ್ವಲಾತ್ ವಾರ್ಷಿಕೋತ್ಸವ ಹಾಗೂ ಈದ್-ಮಿಲಾದ್ ಅಂಗವಾಗಿ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮವನ್ನು ಬಾಳೆಹೊನ್ನೂರಿನ ಜನಾಬ್ ಅಬ್ಬಾಸ್ ಮದನಿ, ಮಹಮ್ಮದ್ ಸೂಫಿಯಾನ್ ಹಾಫಿಲ್ ನಡೆಸಿಕೊಟ್ಟರು.
ಸಾಮೂಹಿಕ
ಪೊಂಗಲ್ ಕಾರ್ಯಕ್ರಮ
ಚಿಕ್ಕಮಗಳೂರು: ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ತಮಿಳು ಸಂಘದ ವತಿಯಿಂದ ವಿಶೇಷವಾಗಿ ಸಾಮೂಹಿಕ ಪೊಂಗಲ್ ಕಾರ್ಯಕ್ರಮ ನೆರವೇರಿಸಲಾಗಿತ್ತು.   ಗ್ರಾಮದ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಿ 40ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪೊಂಗಲ್ ತಯಾರಿಸಿ ಸಾರ್ವಜನಿಕರಿಗೆ ವಿತರಿಸಿದರು. ಕಾರ್ಯಕ್ರಮದ ಅಂಗವಾಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಗ್ರಾಮೀಣ ಕ್ರೀಡೆಗಳಾದ ವಾಲಿಬಾಲ್, ಕೋಕೋ, ರಂಗೋಲಿ ಸ್ಪರ್ಧೆ, ಮಡಿಕೆ ಒಡೆಯುವ ಆಟ, ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ ತಮಿಳು ಸಂಘದ ಪದಾಧಿಕಾರಿಗಳಾದ ಶಂಕರ್ ಮಾತನಾಡಿದರು. ಈ ಸಂದರ್ಭದಲ್ಲಿ ಜಿ. ರಘು , ಎಸ್. ವಿಜಯಕುಮಾರ್, ರಮೇಶ್, ಕಾಶಿನಾಥ್, ಚಿನ್ನಸ್ವಾಮಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.