ಚಿಕ್ಕಮಗಳೂರು

19 ರಂದು ರಸ್ತೆ ಓಟದ ಸ್ಪರ್ಧೆ

Published On :


ಕ.ಪ್ರ.ವಾರ್ತೆ    ಚಿಕ್ಕಮಗಳೂರು    ಜ.16
ಪುರುಷರ ಮತ್ತು ಮಹಿಳೆಯರ, ಪ್ರೌಢಶಾಲೆ ಬಾಲಕ, ಬಾಲಕಿಯರ ಹಾಗೂ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಜಿಲ್ಲಾ ಮಟ್ಟದ ರಸ್ತೆ ಓಟದ ಸ್ಪರ್ಧೆಯನ್ನು ಜ. 19 ರಂದು ನಗರದಲ್ಲಿ ಏರ್ಪಡಿಸಲಾಗಿದೆ.
 ಅಂದು ಬೆಳಿಗ್ಗೆ 7 ಗಂಟೆಗೆ ಓಟದ ಸ್ಪರ್ಧೆ ಆರಂಭವಾಗಲಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಹೆಚ್.
 ಉದಯ್ ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
 ಎಲ್ಲಾ ವಿಭಾಗಗಳಲ್ಲಿಯೂ ಪ್ರಥಮ 6 ಜನರಿಗೆ ಬಹುಮಾನವನ್ನು ನೀಡಲಾಗುವುದು. ಪ್ರಥಮ ಬಹುಮಾನವಾಗಿ 1 ಸಾವಿರ ರೂ. ನಗದು, ಚಿನ್ನದ ಪದಕ, ದ್ವಿತೀಯ ಬಹುಮಾನ 750 ರೂ. ಹಾಗೂ ಬೆಳ್ಳಿ ಪದಕ, ತೃತೀಯ ಬಹುಮಾನ 600 ರೂ. ಮತ್ತು ಕಂಚಿನ ಪದಕ, ನಾಲ್ಕನೇ ಬಹುಮಾನ 400 ರೂ. ಹಾಗೂ ಕಂಚಿನ ಪದಕ, ಐದು ಮತ್ತು ಆರನೇ ಸ್ಥಾನಗಳಿಗೆ ಕಂಚಿನ ಪದಕವನ್ನು ನೀಡಲಾಗುವುದು ಎಂದು ತಿಳಿಸಿದರು.
 ಕಳೆದ 30 ವರ್ಷಗಳ ಹಿಂದೆ ಆರಂಭಗೊಂಡಿದ್ದ ಅಸೋಸಿಯೇಷನ್ ವಿವಿಧ ಕಾರಣಗಳಿಂದಾಗಿ ಯಾವುದೇ ಚಟುವಟಿಕೆಯನ್ನು ನಡೆಸುತ್ತಿರಲಿಲ್ಲ. ಇದೀಗ ಹಿರಿಯ ಅಥ್ಲೆಟ್‌ಗಳು ಸೇರಿ ಅಸೋಸಿಯೇಷನ್ ಕಾರ್ಯ ಚಟುವಟಿಕೆಗಳನ್ನು ಪುನಃ ಆರಂಭಿಸಿದ್ದು, ರಾಜ್ಯ ಅಥ್ಲೆಟಿಕ್ ಅಸೋಸಿಯೇಷನೊಂದಿಗೆ ನೋಂದಣಿ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷ ಸಿ.ಎನ್. ವಿಜಯ್ ಕುಮಾರ್, ಕಾರ್ಯದರ್ಶಿ ಸಿ.ಕೆ. ಮಂಜುನಾಥ್, ಖಜಾಂಚಿ ಪ್ರಕಾಶ್ ಜೈನ್ ಹಾಗೂ ಮಾಣಿಕ್‌ಚಂದ್ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.