ವಿದ್ಯಾರ್ಥಿ ಜೀವನ ಅತ್ಯಮೂಲ್ಯ
ಚಿಕ್ಕಮಗಳೂರು: ವಿದ್ಯಾರ್ಥಿ ಜೀವನ ಅತ್ಯಮೂಲ್ಯ. ವಿದ್ಯಾರ್ಥಿಯು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಕರೆ ನೀಡಿದ್ದಾರೆ.
ನಗರದ ಜೆವಿಎಸ್ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯೆ ನಿರ್ಲಕ್ಷಿಸಿದರೆ ಮುಂದಿನ ಭವಿಷ್ಯ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಕಿವಿ ಮಾತು ಹೇಳಿದರು.
ಸರ್ಕಾರ ಎಲ್ಲಾ ಖಾಸಗಿ ಶಾಲೆಗಳಲ್ಲೂ ಆರ್ಟಿಇ ಯೋಜನೆಯಡಿ 25ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಬೇಕು. ಕೆಲವು ಶಾಲೆಗಳಲ್ಲಿ ಆರ್ಟಿಇ ಯೋಜನೆಯಡಿ ಆಯ್ಕೆಯಾದ ಮಕ್ಕಳಿಗೂ ಸಹ ಶುಲ್ಕ ತೆಗೆದುಕೊಂಡಿರುವುದು ದೂರು ಬಂದಿದೆ. ಅಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರೇರೇಪಿಸಿ: ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಐ.ಎಂ. ಮಹೇಶ್ ಗೌಡ ಮಾತನಾಡಿ, ಪ್ರೌಢವ್ಯವಸ್ಥೆಯ ಮಕ್ಕಳಲ್ಲಿ ಕಲಿಯುವ ಅವಕಾಶಗಳು ಹೆಚ್ಚು ಇರುತ್ತವೆ. ಇದಕ್ಕೆ ಪೂರಕವಾಗಿ ಶಿಕ್ಷಕರು ಮತ್ತು ಪೋಷಕರು ಮಕ್ಕಳನ್ನು ಪ್ರೇರೇಪಿಸಿ ಅವರ ಭವಿಷ್ಯ ರೂಪಿಸಬೇಕೆಂದರು.
ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷೆ ಎಚ್.ಆರ್. ಕನಕ, ಕಾರ್ಯದರ್ಶಿ ಸಂದೀಪ್, ಜೆವಿಎಸ್ ಶಾಲಾ ಕಾರ್ಯದರ್ಶಿ ಎಂ.ಡಿ. ಹಿಮಕೀರ್ತಿ, ನಿರ್ದೇಶಕರಾದ ಕೆ.ಎಸ್. ನಾರಾಯಣಗೌಡ, ಕೆ.ಎ. ರಾಜೇಗೌಡ, ಲಕ್ಷ್ಮಣಗೌಡ, ಎಚ್.ಎಸ್. ಕವೀಶ್, ಟಿ.ಆರ್. ಹರೀಶ್, ಎಂ.ಡಿ. ರಮೇಶ್, ಎಸ್.ಎಸ್. ವೆಂಕಟೇಶ್, ಶಾಲಾ ಮುಖ್ಯೋಪಾಧ್ಯಾಯರಾದ ಅಪ್ಪಯ್ಯ, ಶ್ರೀದೇವಿ, ಕಾಲೇಜು ಪ್ರಾಂಶುಪಾಲರಾದ ತೇಜಸ್ವಿನಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂತ ಸ್ವಾಗತಿಸಿ, ಶಂಕರೇಗೌಡ ನಿರೂಪಿಸಿ, ಶ್ರೀಲತಾ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

