ಚಿಕ್ಕಮಗಳೂರು

ಮೂಲ ಸೌಲಭ್ಯ ಕಲ್ಪಿಸಲು ಆಗ್ರಹ

Published On :

ಚಿಕ್ಕಮಗಳೂರು: ವಸ್ತಾರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರಿಕಟ್ಟೆ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಒದಗಿಸುವಂತೆ ಕರ್ನಾಟಕ ರೈತ ಸಂಘದ ತಾಲೂಕು ಉಪಾಧ್ಯಕ್ಷ ದೇವರಾಜು ಬೊಂಬೈಲು ಅವರು ಆಗ್ರಹಿಸಿದ್ದಾರೆ.
ಮಾರಿಕಟ್ಟೆ ಗ್ರಾಮದಲ್ಲಿ ಸುಮಾರು 60 ಮನೆಗಳಿದ್ದು, ಇವುಗಳು ಮೂಲಭೂತ ಸೌಲಭ್ಯದಿಂದ ವಂಚಿತವಾಗಿವೆ. ಈ ಗ್ರಾಮಕ್ಕೆ ಪಂಚಾಯ್ತಿಯಿಂದ ಇದುವರೆಗೂ ಯಾವುದೇ ಸೌಲಭ್ಯ ಒದಗಿಸಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
 8-10 ಮನೆಗಳಿಗೆ ಒಂದು ನಲ್ಲಿ ಹಾಕಿದ್ದು ಸಮರ್ಪಕವಾಗಿ ಎಲ್ಲರಿಗೂ ನೀರು ದೊರಕುತ್ತಿಲ್ಲ. ಈಗ ನೀರು ಬಿಡಲು ನಿಗದಿಪಡಿಸಿರುವ ಅವಧಿಯನ್ನು ಹೆಚ್ಚು ಮಾಡಬೇಕು. ಈ ಗ್ರಾಮಕ್ಕೆ ಒಂದು ಅಂಗನವಾಡಿ ಕೇಂದ್ರವನ್ನು ಮಂಜೂರು ಮಾಡಬೇಕೆಂದು ಆಗ್ರಹಿಸಿದ್ದಾರೆ.
ಗ್ರಾಮದಿಂದ ಹರಿಯುವ ಚರಂಡಿ ನೀರು ಮುಖ್ಯ ರಸ್ತೆಗೆ ಬಂದು ನಿಂತು ಗಬ್ಬು ನಾರುತ್ತಿದೆ. ಇದರಿಂದ ಹಲವಾರು ರೀತಿಯ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದೆ. ಮುಖ್ಯ ರಸ್ತೆಯ ಮೋರಿ ಹಾಳಾಗಿದ್ದು, ನೀರು ಮುಂದೆ ಹರಿಯದಂತೆ ಅಡ್ಡಗಟ್ಟಿದೆ. ಇದನ್ನು ಸರಿಪಡಿಸುವಂತೆ ಪಂಚಾಯ್ತಿಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಕೂಡಲೇ ವಸ್ತಾರೆ ಪಂಚಾಯ್ತಿ ಆಡಳಿತ ವರ್ಗ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗದಿದ್ದಲ್ಲಿ ಗ್ರಾಮಸ್ಥರೊಂದಿಗೆ ಪಂಚಾಯ್ತಿ ಕಚೇರಿಗೆ ಬೀಗ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.