ವಾಹನ ಸಂಚಾರ ಕಿರಿಕಿರಿ ಶೀಘ್ರ ತಪ್ಪಿಸಲು ಆಗ್ರಹ
ಬೀರೂರು: ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದು, ಶೀಘ್ರವೇ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಬೇಕಿದೆ.
ಪಟ್ಟಣದಲ್ಲಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯ 206 ರಲ್ಲಿರುವ ತರಳಬಾಳು ಕಲ್ಯಾಣ ಮಂದಿರದಿಂದ ಮೆಸ್ಕಾಂ ಕಚೇರಿವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಶಾಲಾ -ಕಾಲೇಜುಗಳಿವೆ. ಸಾರ್ವಜನಿಕ ಆಸ್ಪತ್ರೆ, ಖಾಸಗಿ ಮತ್ತು ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳು, ಉಪಹಾರ ಮಂದಿರಗಳು ಹಾಗೂ ವಾಣಿಜ್ಯ ಮಳಿಗೆಗಳು ಇವೆ. ಇದರಿಂದ ಅಲ್ಲಿಗೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಪರಿಣಾಮ ದಟ್ಟ ವಾಹನ ಸಂಚಾರ ಇರುವುದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಜೀವ ಬಿಗಿ ಹಿಡಿದುಕೊಂಡು ಸಂಚರಿಸುವಂತಾಗಿದೆ.
ಚಾಲಕರು ಎಲ್ಲೆಂದರಲ್ಲಿ ವಾಹನ ನಿಲುಗಡೆಗೊಳಿಸುವುದು, ಅತಿ ವೇಗವಾಗಿ ಅಡ್ಡಾದಿಡ್ಡಿ ನುಗ್ಗುವುದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.
ಪದೇ ಪದೇ ರಸ್ತೆ ಅಫಘಾತಗಳು ಸಂಭವಿಸುತ್ತಿವೆ. ಅನೇಕ ಸಾವು ನೋವಿನ ಪ್ರಕರಗಗಳು ದಾಖಲಾಗಿವೆ. ಸುರಕ್ಷಿತವಾಗಿ ಮನೆಗಳಿಗೆ ಬಂದರೆ ಸಾಕು ಎಂದು ಚಡುಪಡಿಸುತ್ತಾರೆ.
ರಸ್ತೆ ಉಬ್ಬು: ಪೊಲೀಸ್ ಇಲಾಖೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪಟ್ಟಣದ ಆಯ್ದ ಪ್ರದೇಶಗಳಲ್ಲಿ (ಜನನಿಬಿಡ ಪ್ರದೇಶಗಳು) ತರಳಬಾಳು ಕಲ್ಯಾಣ ಮಂಟಪ, ಸಾರಿಗೆ ಸಂಸ್ಥೆಯ ನಿಲ್ದಾಣದ ಮುಂಭಾಗ, ಸಾರ್ವಜನಿಕ ಆಸ್ಪತ್ರೆ ಮುಂಭಾಗ, ಗಣಪತಿ ಪೆಂಡಾಲ್ ಮುಂಭಾಗ ಪ್ರೀತಿ ಕ್ಯಾಂಟೀನ್ ಹತ್ತಿರ ರಸ್ತೆ ಉಬ್ಬುಗಳನ್ನು ಹಾಕಿಸಬೇಕು.
ವಾಹನಗಳ ನಿಲುಗಡೆಗೆ ಸೂಕ್ತ ಪ್ರದೇಶಗಳನ್ನು ಗುರುತಿಸಿದಲ್ಲಿ ಪಟ್ಟಣದೊಳಗಿನ ವೇಗದ ಮಿತಿ ಕಡಿಮೆಗೊಳಿಸಿ ನಾಮಫಲಕ ಅಳವಡಿಸಬೇಕು. ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನ ಚಾಲಕರಿಗೆ ದಂಡ ವಿಧಿಸುವ ಕ್ರಮಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

