ರಸ್ತೆ ನಿಯಮ ಪಾಲನೆ ಎಲ್ಲರ ಕರ್ತವ್ಯ
ತರೀಕೆರೆ: ರಸ್ತೆ ಸುರಕ್ಷತಾ ನಿಯಮ ಪಾಲಿಸುವುದು ಎಲ್ಲರ ಕರ್ತವ್ಯವಾಗಿದ್ದು, ಇದರಿಂದ ಸುಗಮ ಸಂಚಾರ ಸಾಧ್ಯವಿದೆ ಎಂದು ತರೀಕೆರೆ ಪೊಲೀಸ್ ವೃತ್ತ ನಿರೀಕ್ಷಕ ಎಚ್.ಎಸ್. ಸುರೇಶ್ ತಿಳಿಸಿದ್ದಾರೆ. ಮಲೆನಾಡು ಪರಿಷತ್, ಪೊಲೀಸ್ ಠಾಣೆ ವತಿಯಿಂದ ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಸಂಚಾರಿ ಸುರಕ್ಷತಾ ನಿಯಮ ಪಾಲಿಸಿದಲ್ಲಿ ಮಾತ್ರ ಅಪಘಾತ ತಡೆಗಟ್ಟಬಹುದು, ವಯೋವುತಿ ಮತ್ತು ಚಾಲನಾ ಪರವಾನಗಿ ಇಲ್ಲದ ವಿದ್ಯಾರ್ಥಿಗಳು, ಸಾರ್ವಜನಿಕರು ಯಾವುದೇ ಕಾರಣಕ್ಕೂ ವಾಹನ ಚಲಾಯಿಸಬಾರದು, ಅಂತಹವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು, ಪಾದಚಾರಿಗಳು ಯಾವಾಗಲೂ ರಸ್ತೆಯ ಎಡಭಾಗದಲ್ಲಿ ಚಲಿಸಿ, ಝೀಬ್ರಾ ಕ್ರಾಸ್ನಲ್ಲಿ ಮಾತ್ರ ರಸ್ತೆ ದಾಟಬೇಕು ಎಂದು ಅವರು ತಿಳಿಸಿದರು. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಉಲ್ಲಾಸ್ ಆರ್. ಪವಾರ್, ಸಂಸ್ಥೆ ಕಾರ್ಯದರ್ಶಿ ಟಿ.ಜಿ. ಶಶಾಂಕ, ಮುಖ್ಯ ಶಿಕ್ಷಕಿ ಆರ್ಜಿ. ಸುಜಾತ ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

