ಚಿಕ್ಕಮಗಳೂರು

28 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ

Published On :

ಕೊಪ್ಪ: ಬಿಜೆಪಿ ಕಾಂಗ್ರೆಸ್ ಹೊರತುಪಡಿಸಿದ ರಾಜಕೀಯ ಪಕ್ಷಗಳ ಬೃಹತ್ ಸಮಾವೇಶ ಮುಂದಿನ ತಿಂಗಳು 15-18 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ತೃತೀಯ ರಂಗ ಅಸ್ಥಿತ್ವಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ವ್ಯಕ್ತಪಡಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸಿದ್ಧವಾಗಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ರಾಜಕೀಯ ಸಮಾವೇಶ ಆಯೋಜಿಸುತ್ತಿದೆ. ಬಿಜೆಪಿ, ಕಾಂಗ್ರೆಸ್ ಹೊರತುಪಡಿಸಿದ ಪಕ್ಷಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿವೆ. 5 ಲಕ್ಷ ಜನರ ಸಮಾವೇಶ ಅದಾಗಲಿದೆ ಎಂದರು.
ಪಕ್ಷ ರಾಜ್ಯಾದ್ಯಂತ ಹಲವು ಸಮಾವೇಶ ಸಂಘಟಿಸಿದೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ ಲೋಕಸಭಾ ಅಭ್ಯರ್ಥಿಗಳ ಯಾದಿ ಬಿಡುಗಡೆ ಮಾಡಲಿದೆ. ಎಡಪಕ್ಷಗಳೊಂದಿಗೆ ಹೊಂದಾಣಿಕೆ ಏರ್ಪಟ್ಟಿಲ್ಲ. ಒಂದೆರಡು ಸ್ಥಾನ ಬಿಟ್ಟುಕೊಡುವ ಸಾಧ್ಯತೆ ಇದೆ ಎಂದ ಅವರು, ರಾಜ್ಯದಲ್ಲಿ ಜೆಡಿಎಸ್ 18 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ದೆಹಲಿಯಲ್ಲಿ ರಾಜಕೀಯ ಕೂಸೊಂದು ಎರಡು ರಾಷ್ಟ್ರೀಯ ಪಕ್ಷಗಳನ್ನು ಮೂಲೆಗುಂಪು ಮಾಡಿರುವುದು ಕಾಂಗ್ರೆಸ್ ಮತ್ತು ಬಿಜೆಪಿ ಬಗ್ಗೆ ಜನರ ಅತೃಪ್ತಿ, ಅಸಹನೆಗೆ ನಿದರ್ಶನವಾಗಿದೆ. ಬಡತನ ನಿವಾರಣೆಗೆ, ಉದ್ಯೋಗ ಸೃಷ್ಟಿ, ರೈತರ ಬೆಳೆದ ಬೆಳೆಗೆ ದರ ಹಾಗೂ ಮಾರುಕಟ್ಟೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳು ಮೂಲಕ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರದ ವಿರುದ್ಧ ಪಕ್ಷ ಸಮರ ಸಾರಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಎಚ್.ಟಿ. ರಾಜೇಂದ್ರ, ಶೃಂಗೇರಿ ವಿಧಾನಸಭೆ ಪರಾಜಿತ ಅಭ್ಯರ್ಥಿ ತಲಕಾನೆ ರಾಜೇಂದ್ರ, ಕೆ.ಕೆ. ಸಾಯಿನಾಥ್, ಕಣಿವೆ ವಿನಯ್ ಮೊದಲಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.