ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಕುವೆಂಪು ವಿಶ್ವಾವಿದ್ಯಾನಿಲಯ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಘಟಕದ ವತಿಯಿಂದ ಎಂ.ಫಿಲ್, ಮತ್ತು ಪಿಎಚ್ಡಿ ಸಂಶೋಧನಾ ಶಿಷ್ಯ ವೇತನಕ್ಕೆ ಪ್ರವರ್ಗ- 1, 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅರ್ಹ ಸಂಶೋಧನಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಚಾಲಕರು, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಘಟಕ, ಜ್ಞಾನ ಸಹ್ಯಾದ್ರಿ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ, ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಫಲ-ಪುಷ್ಪ ಪ್ರದರ್ಶನ
ಚಿಕ್ಕಮಗಳೂರು: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಮೈಸೂರು ಉದ್ಯಾನ ಕಲಾ ಸಂಘ ಹಾಗೂ ಆತ್ಮ (ಎಟಿಎಂಎ) ಯೋಜನೆಯ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜ.26ರಿಂದ 28ರ ವರೆಗೆ ಕೆ.ಎಂ. ರಸ್ತೆಯ ಬೋಳರಾಮೇಶ್ವರ ದೇವಸ್ಥಾನದ ಹತ್ತಿರದ ತೋಟಕಾರಿಕೆ ಉಪ ನಿರ್ದೇಶಕ ಕಚೇರಿ ಆವರಣದಲ್ಲಿ ಫಲ-ಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಸಿ.ಟಿ. ರವಿ ಪುಷ್ಪವನ, ಜಿ.ಪಂ. ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಪುಷ್ಪ ಕಲಾಕೃತಿಯನ್ನು ಹಾಗೂ ಜಿ.ಪಂ. ಉಪಾಧ್ಯಕ್ಷೆ ಇಲಾಖಾ ಮಳಿಗೆಗಳ ಹಾಗೂ ಮಧು ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ನಿರಂಜನ್ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

