ಚಿಕ್ಕಮಗಳೂರು

ಜೆಡಿಎಸ್ 'ಆಪರೇಷನ್' ಮಾಡಲ್ಲ: ದತ್ತ

Published On :

ಕಡೂರು:  ಬಿಜೆಪಿಯಲ್ಲಿ ಕೆಜೆಪಿ ವಿಲೀನವಾಗಿ ವಿರೋಧ ಪಕ್ಷದ ಸ್ಥಾನಕ್ಕೆ ಚ್ಯುತಿ ಬಂದಲ್ಲಿ ವಿರೋಧ ಪಕ್ಷದ ಸ್ಥಾನಮಾನದ ಅಧಿಕಾರಕ್ಕಾಗಲಿ ಜೆಡಿಎಸ್ ಬಿಜೆಪಿಯಂತೆ ಶಾಸಕರನ್ನು ಸೆಳೆಯುವ ಆಪರೇಷನ್ಗೆ ಮುಂದಾಗುವುದಿಲ್ಲ ಎಂದು ಶಾಸಕ, ವಿರೋಧ ಪಕ್ಷದ ಉಪ ನಾಯಕ ವೈಎಸ್ವಿ ದತ್ತ ಹೇಳಿದರು.
ಕೆಜೆಪಿ ಬಿಜೆಪಿಯೊಂದಿಗೆ ವಿಲೀನವಾದಲ್ಲಿ ಜೆಡಿಎಸ್ ಯಾವ ಸ್ಥಾನಮಾನಕ್ಕೂ ಆಸೆಪಡದೆ ವಿಧಾನಸಭೆಯ ಒಳಗೂ- ಹೊರಗೂ ಸಮರ್ಥ ವಿರೋಧ ಪಕ್ಷವಾಗಿ ಹೋರಾಟ ಮಾಡುತ್ತದೆಯೇ ಹೊರತು ವಿರೋಧ ಪಕ್ಷದ ಸ್ಥಾನ ಹೋಗಲಿದೆ ಎಂಬ ಭೀತಿ ಜೆಡಿಎಸ್ ಪಕ್ಷಕ್ಕಾಗಲೀ ಮುಖಂಡರಿಗಾಗಲಿ ಇಲ್ಲ ಎಂದರು.
ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ಷೇತ್ರದಿಂದ ತಲಾ ಮೂವರು ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಅಭ್ಯರ್ಥಿಗಳ ಆಯ್ಕೆಯನ್ನು 2013ರ ಮೇನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಜೆಡಿಎಸ್ ಹೆಚ್ಚು ಮತ ಗಳಿಸಿದೆ ಎಂಬ ಆಧಾರದ ಮೇಲೆ ಗೆಲ್ಲುವ ಅಭ್ಯರ್ಥಿಗೆ ಆದ್ಯತೆ ನೀಡಿ ಟಿಕೆಟ್ ನೀಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೆ.ಎಂ. ಮಹೇಶ್ವರಪ್ಪ, ಎನ್. ಇಮಾಮ್, ಜಿಗಣೇಹಳ್ಳಿ ನೀಲಂಕಠಪ್ಪ, ಮಹೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.