27ರಂದು ಸಮಾಧಿ ನಿರ್ಮಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಮೂಡಿಗೆರೆ ಜ.22
ಜ.21ರಂದು ರಸ್ತೆ ಡಾಂಬರೀಕರಣ ಕಾಮಗಾರಿ ಆರಂಭಿಸುವ ಭರವಸೆ ನೀಡಿ ಈಗ ಹಾರಿಕೆ ಉತ್ತರ ನೀಡುತ್ತಿರುವ ಶಾಸಕರು ಹಾಗೂ ಅಧಿಕಾರಿಗಳ ಸಮಾಧಿ ಮಾಡಿ ಪ್ರತಿಭಟನೆ ನಡೆಲಾಗುವುದು ಎಂದು ಸಿಪಿಐ ತಾಲೂಕು ಕಾರ್ಯದರ್ಶಿ ಗೋಪಾಲ ಶೆಟ್ಟಿ ಹೇಳಿದ್ದಾರೆ.
ಇಲ್ಲಿನ ಕಳಸ ಹೋಬಳಿಯ ಹಿರೇಬೈಲಿನಿಂದ ಕರಡಿಗುಡ್ಡ ಹಾಗೂ ಕಳಸದಿಂದ ಹೊರನಾಡಿನ ತನಕ ಹದಗೆಟ್ಟ ರಸ್ತೆ ಡಾಂಬರೀಕರಣಕ್ಕೆ ಕೋಟ್ಯಂತರ ರು. ಮಂಜೂರಾಗಿದ್ದರೂ ಕಾಮಗಾರಿಗೆ ಮಾತ್ರ ಚಾಲನೆ ನೀಡಿರಲಿಲ್ಲ. ಈ ನಿಟ್ಟಿನಲ್ಲಿ ಸಿಪಿಐ ಪಕ್ಷ, ಹಿರೇಬೈಲಿನ ಆಟೋಚಾಲಕ ಹಾಗೂ ಮಾಲೀಕರು, ವರ್ತಕರು, ಊರಿನ ನಾಗರಿಕರು ಸೇರಿ ಕಳೆದ ಕೆಲ ದಿನಗಳ ಹಿಂದೆ ಹಿರೇಬೈಲ್ ಬಂದ್ ಆಚರಿಸಿ ರಸ್ತೆ ತಡೆ, ಪ್ರತಿಭಟನೆ ನಡೆಸಿದ್ದರು.
ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಶಾಸಕರು ಮತ್ತು ಲೋಕಪಯೋಗಿ ಇಲಾಖೆ ಅಭಿಯಂತರರು ಜ.21ರಂದು ಗುದ್ದಲಿ ಪೂಜೆ ನಡೆಸಿ, ಹಿರೆಬೈಲಿನಿಂದ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದ್ದರು. ಶಾಸಕರ ಮತ್ತು ಅಧಿಕಾರಿಗಳ ಮಾತಿಗೆ ಬೆಲೆ ಕೊಟ್ಟು ಪ್ರತಿಭಟನೆ ಹಿಂದಕ್ಕೆ ಪಡೆದುಕೊಳ್ಳಲಾಗಿತ್ತು. ಆದರೆ ಈಗ ಇನ್ನೂ ಕಾಮಗಾರಿ ಪ್ರಾರಂಭಿಸುತ್ತಿಲ್ಲ. ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಜನರ ಕಿವಿಗೆ ಹೂ ಇಡುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜ.27ರಂದು ಹಿರೇಬೈಲ್ ರಸ್ತೆಯಲ್ಲಿ ಶಾಸಕರು ಹಾಗೂ ಸಂಬಂಧಪಟ್ಟ ಇಬ್ಬರು ಎಂಜಿನಿಯರುಗಳ ಸಮಾಧಿ ಮಾಡಿ ಅವರ ಭಾವಚಿತ್ರವನ್ನು ಅಂಟಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಗೋಪಾಲ ಶೆಟ್ಟಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

