ಕಳಪೆ ಡಾಂಬರೀಕರಣ: ಆರೋಪ
ಮೂಡಿಗೆರೆ: ಕೊಟ್ಟಗೆಹಾರದಿಂದ ಎಸ್.ಕೆ. ಬಾರ್ಡರ್ವರೆಗಿನ 23 ಕೋಟಿ ವೆಚ್ಚದ ಡಾಂಬರೀಕರಣದ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ನಡೆಯುತ್ತಿದೆ. ಮರು ಡಾಂಬರೀಕರಣ ಮಾಡದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಕೆ.ಸಿ. ಧರಣೇಂದ್ರ ಹೇಳಿದ್ದಾರೆ.
ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ನೀಡಿದ ಅವರು, ಸಂಸ್ಥೆಯಿಂದ ಬಸ್ರಿಕಲ್ವರೆಗೆ ಅತ್ಯಂತ ಕಳಪೆಮಟ್ಟದಲ್ಲಿ ಡಾಂಬರೀಕರಣ ಮಾಡಲಾಗಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡಿಲ್ಲ ಎಂದು ಆರೋಪಿಸಿದರು.
ಒತ್ತಾಯ: ಸರ್ಕಾರದಿಂದ ಬಿಡುಗಡೆಯಾದ ಅನುದಾನಗಳು ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯ ಇದಕ್ಕೆ ಕಾರಣವಾಗಿದೆ. ಲೋಕೋಪಯೋಗಿ ಇಲಾಖೆ ಎಂಜಿನಿಯರುಗಳು ತಾಲೂಕು ಕೇಂದ್ರದಿಂದ ಸುಮಾರು 100 ಕಿಮೀ ದೂರದಿಂದ ಬರಬೇಕು. ಇಲ್ಲಿ ಕಾಮಗಾರಿ ಮಾಡುತ್ತಿರುವಾಗ ಗುಣಮಟ್ಟ ಪರೀಕ್ಷೆ ಮಾಡುತ್ತಿಲ್ಲ. ಗುತ್ತಿಗೆದಾರರು ಲಾಭದ ದೃಷ್ಟಿಯಿಂದ ಮನಸ್ಸಿಗೆ ಬಂದಂತೆ ಡಾಂಬರೀಕರಣ ಮಾಡುತ್ತಿದ್ದಾರೆ. ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಕಳಸದಲ್ಲಿ ವಾಸ್ತವ್ಯ ಹೂಡಿ ಇಲ್ಲಿಯ ಎಲ್ಲಾ ರಸ್ತೆ ಡಾಂಬರೀಕರಣ, ಇನ್ನಿತರೆ ಕಾಮಗಾರಿಗಳು ಉತ್ತಮ ಗುಣಮಟ್ಟದಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸಿಮೆಂಟ್ ರಸ್ತೆಗೆ ಆಗ್ರಹ: ಮರು ಡಾಂಬರೀಕರಣ ಮಾಡದೆ ಹೋದಲ್ಲಿ ಪ್ರತಿಭಟಿಸಲಾಗುವುದು. ಬರಬೇಕಾದ ಬಿಲ್ ತಡೆ ಹಿಡಿಯುತ್ತೇವೆ. ಕುದುರೆಮುಖದಿಂದ ಮುಂದೆ ಒಂದೆರಡು ಕಡೆ ರಸ್ತೆಗಳಲ್ಲಿ ಜಲ ಏಳುವ ಸ್ಥಳಗಳಿವೆ. ಇಲ್ಲಿ ಡಾಂಬರೀಕರಣ ಮಾಡಿದರೆ ಅದು ನಿಲ್ಲುವುದಿಲ್ಲ. ಆದ್ದರಿಂದ ಅಂತಹ ಪ್ರದೇಶಗಳನ್ನು ಗುರುತಿಸಿ ಅಲ್ಲಿಗೆ ಕಾಂಕ್ರೀಟ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.
ಈ ಸಂದರ್ಭ ಕಾಂಗ್ರೆಸ್ ಮುಖಂಡ ಎನ್.ಎಂ. ಹರ್ಷ, ಎಂಜಿನಿಯರ್ ಚನ್ನಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

