ವಿದ್ಯಾರ್ಥಿಗಳ ಹೋರಾಟ ಕಿತ್ತುಕೊಳ್ಳುವ ಯತ್ನ
ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹೊರಡಿಸಿರುವ ಸುತ್ತೋಲೆ ಹಿಂಪಡೆಯುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದರು.
ಸರ್ಕಾರಿ, ಖಾಸಗಿ ಅನುದಾನಿತ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಕಾರ್ಯಕ್ರಮಗಳು, ಪ್ರತಿಭಟನೆ, ಮುಷ್ಕರಗಳಿಗೆ ಭಾಗವಹಿಸಬಾರದೆಂದು ಹಾಗೂ ಯಾವುದೇ ಸಂಘ- ಸಂಸ್ಥೆಗಳು ಕಾಲೇಜು ಪ್ರವೇಶಿಸಲು ಅವಕಾಶ ನೀಡಬಾರದೆಂದು ಸುತ್ತೋಲೆ ಹೊರಡಿಸಲಾಗಿದೆ. ಇದು ವಿದ್ಯಾರ್ಥಿಗಳ ಹೋರಾಟದ ಹಕ್ಕನ್ನು ಕಿತ್ತುಕೊಳ್ಳುವ ಹುನ್ನಾರ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಪ್ರಜಾಪ್ರಭುತ್ವದಲ್ಲಿ ಎಲ್ಲಾ ಪ್ರಜೆಗಳಿಗೂ ಹೋರಾಟದ ಹಕ್ಕಿದೆ. ಆದರೆ, ಜಿಲ್ಲಾಡಳಿತ ಮಾತ್ರ ಅದನ್ನು ಗಾಳಿಗೆ ತೂರಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವನ್ನು ಎಷ್ಟರ ಮಟ್ಟಿಗೆ ಪಾಲಿಸುತ್ತಿದ್ದಾರೆಂದು ಅನುಮಾನ ಮೂಡುತ್ತಿದೆ. ವಿದ್ಯಾರ್ಥಿಗಳನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳುವ ಸಾಹಸಕ್ಕೆ ಜಿಲ್ಲಾ ಉಪ ನಿರ್ದೇಶಕರು ಕೈ ಹಾಕಿದ್ದು, ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರ ಮೂಲಕ ಒತ್ತಡ ಹೇರುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ದೂಷಿಸಿದ್ದಾರೆ.
ಜಿಲ್ಲಾಧಿಕಾಗಳು ಮಧ್ಯಪ್ರವೇಶಿಸಿ, ಕರಾಳ ಸುತ್ತೋಲೆ ಹಿಂಪಡೆಯಬೇಕು. ಹಾಗೂ ಪ್ರಜಾಪ್ರಭುತ್ವಕ್ಕೆ ಬೆಲೆ ನೀಡಬೇಕಾಗಿ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ಈ ವಿಷಯವಾಗಿ ವಿದ್ಯಾರ್ಥಿ ಪರಿಷತ್ ಕಳೆದೆರಡು ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಜಿಲ್ಲಾಡಳಿತ ಇದಕ್ಕೆ ಸ್ಪಂದಿಸಿಲ್ಲ. ಜಿಲ್ಲಾಡಳಿತ ತಮ್ಮ ಹಠಮಾರಿ ಧೋರಣೆ ನಿಲ್ಲಿಸಿ, ಸುತ್ತೋಲೆ ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ.
ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಪಿಯುಸಿ ವಿದ್ಯಾರ್ಥಿಗಳನ್ನು ಬಳಕೆ ಮಾಡಿರುವುದನ್ನು ಎಬಿವಿಪಿ ವಿರೋಧಿಸುತ್ತದೆ. ಮತದಾನದ ಹಕ್ಕೇ ಇಲ್ಲದೇ 15- 16 ವರ್ಷದ ಶಾಲಾ- ಕಾಲೇಜು ವಿದ್ಯಾರ್ಥಿಗಳನ್ನು ಮತದಾನದ ಜಾಗೃತಿ ಕಾರ್ಯಕ್ರಮಕ್ಕೆ ಬಳಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಎಬಿವಿಪಿ ಜಿಲ್ಲಾ ಸಂಚಾಲಕ ಸಂತೋಷ್ ಕೋಟ್ಯಾನ್, ನಗರ ಕಾರ್ಯದರ್ಶಿ ಸಚಿನ್ ಮಳಲೂರು, ಜಿಲ್ಲಾ ಪ್ರಮುಖರಾದ ತಿರುಗುಣ ದಯಾನಂದ್, ದರ್ಶನ್ ಹಿರೇಮಠ್, ಶರತ್ ಕೋಟೆ, ಸ್ವರೂಪ್, ದರ್ಶನ್ ಸಖರಾಯಪಟ್ಟಣ, ಭರತ್ ಕೆಳಗೂರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

