ಚಿಕ್ಕಮಗಳೂರು

ಕೋಚ್‌ಗಳ ಖಾಯಂ: ರಾಜ್ಯ ಸರ್ಕಾರ ಪ್ರಸ್ತಾವನೆ

Published On :

ಚಿಕ್ಕಮಗಳೂರು: ಕ್ರೀಡಾ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಕೋಚ್‌ಗಳನ್ನು ಖಾಯಂಗೊಳಿಸುವ ಸಂಬಂಧ ಹಣಕಾಸು ಇಲಾಖೆಗೆ ರಾಜ್ಯ ಸರ್ಕಾರ ಪ್ರಸ್ತಾವನೆಯನ್ನು ಕಳುಹಿಸಿಕೊಟ್ಟಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದ್ದಾರೆ.
ರಾಜ್ಯದಲ್ಲಿ 92 ಜನ ಕೋಚ್‌ಗಳು ತಿಂಗಳಿಗೆ 17 ಸಾವಿರ ಗೌರವಧನದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಖಾಯಂಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಭಾನುವಾರ ತಿಳಿಸಿದರು.
ಹಾಲಿ ಇರುವ 92 ಕೋಚ್‌ಗಳ ಪೈಕಿ ಅರ್ಹರನ್ನು ಮಾತ್ರ ಖಾಯಂಗೊಳಿಸಲಾಗುವುದು ಎಂದ ಅವರು, ಇನ್ನುಳಿದಂತೆ ಕ್ರೀಡಾ ಇಲಾಖೆಯಲ್ಲಿ ಕೋಚ್‌ಗಳ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಲು ಮುಂದಿನ ಹಂತದಲ್ಲಿ ಕ್ರಮ ವಹಿಸಲಾಗುವುದು. ನೇಮಕಾತಿಯ ಸಂದರ್ಭದಲ್ಲಿ ಎಂಪಿಎಡ್ ಅರ್ಹತೆ ಹೊಂದಿದವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಈ ವರ್ಷದ ಬಜೆಟ್ ನಲ್ಲಿ ರಾಜ್ಯ ಸರ್ಕಾರ ಕ್ರೀಡಾ ಇಲಾಖೆಯ 67 ಕೋಟಿ ನೀಡಿತ್ತು. ಇತರೆ ಇಲಾಖೆಗಳಿಗೆ ಹೋಲಿಕೆ ಮಾಡಿದರೆ, ಇದು, ಅತ್ಯಂತ ಕಡಿಮೆ ಮೊತ್ತ. ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಹಣವನ್ನು ನೀಡುವಂತೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗಿದೆ ಎಂದರು.
ಮಂಗಳೂರಿನಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಲಾಗಿದೆ. ಸಕಾಲದಲ್ಲಿ ನಿರ್ವಹಣೆ ಮಾಡಿದೆ ಹೋದರೆ, ಮುಂದಿನ ದಿನಗಳಲ್ಲಿ ಬಹುದಿನದ ವರೆಗೆ ಬಾಳಿಕೆ ಬರುವುದಿಲ್ಲ. ಅದುದರಿಂದ ರಾಜ್ಯದ ಬೇರೆ ಕಡೆಗಳಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣದ ಮೊದಲು ನಿರ್ವಹಣೆ ಬಗ್ಗೆ ಯೋಚಿಸಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಚಿಕ್ಕಮಗಳೂರಿನ ಜಿಲ್ಲಾ ಆಟದ ಮೈದಾನವನ್ನು ಒಳಾಂಗಣವನ್ನಾಗಿ ಮಾಡಲು 8 ಕೋಟಿ ಹಾಗೂ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಅಥ್ಲೇಟಿಕ್‌ಗೆ ಮೀಸಲಿಡಲು 5.25 ಕೋಟಿ ಬೇಕಾಗಬಹುದು. ಈ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಹಾಗೂ ವಕ್ತಾರ ಎ.ಎನ್. ಮಹೇಶ್ ಉಪಸ್ಥಿತರಿದ್ದರು.    

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.