ದೀನ, ದುರ್ಬಲರ ಸೇವೆಯಿಂದ ಬದುಕು ಸಾರ್ಥಕ
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಜ.27
ಬಡವರು, ದುರ್ಬಲರು ಮತ್ತು ವಿಕಲಚೇತನರ ಸೇವೆಯಿಂದ ಬದುಕು ಸಾರ್ಥಕವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದ್ದಾರೆ.
ನಗರದ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಭಾನುವಾರ ನಡೆದ ವಾರ್ಷಿಕೋತ್ಸವ, ಗಣರಾಜ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಮಾತನಾಡಿದರು.
ಬದುಕಿನಲ್ಲಿ ಹಣವನ್ನು ಎಷ್ಟು ಗಳಿಸಿದರೂ ಸಾಲದು. ಹಣದ ಹಿಂದೆ ಓಡುವುದರಿಂದ ಮಾನಸಿಕ ಶಾಂತಿ ನೆಮ್ಮದಿ ದೂರವಾಗುತ್ತವೆ ಎಂದ ಅವರು, ಗಳಿಸಿದ ಹಣದಲ್ಲಿ ಸ್ವಲ್ಪ ಭಾಗವನ್ನಾದರೂ ದುರ್ಬಲರು, ವಿಕಲಚೇತನರ ಕಲ್ಯಾಣಕ್ಕಾಗಿ ನೀಡಿದರೆ ಮನಶ್ಶಾಂತಿ ಲಭಿಸುತ್ತದೆ ಎಂದರು.
ಸರ್ಕಾರದಿಂದ ಸಾಧ್ಯವಾದ ಎಲ್ಲಾ ಸವಲತ್ತುಗಳನ್ನು ಸಂಸ್ಥೆಗೆ ದೊರಕಿಸಿಕೊಡುವ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ತಮ್ಮ ನಿಧಿಯಿಂದ 2 ಲಕ್ಷ ಅನುದಾನ ನೀಡುವುದಾಗಿ ತಿಳಿಸಿದರು.
ಆತ್ಮಶಕ್ತಿ: ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಧಾರವಾಡ ಜಿಲ್ಲೆ ಮನಗುಂಡಿ ಮಹಾಮನೆಯ ಬಸವಾನಂದ ಸ್ವಾಮೀಜಿ, ಅಂಧರು ಮತ್ತು ಅಂಗವಿಕಲರು ತಮಗೆ ಒದಗಿರುವ ದುಸ್ಥಿತಿಯಿಂದ ಧೃತಿಗೆಡದೆ ಪರಿಸ್ಥಿತಿಯನ್ನು ಸವಾಲಾಗಿ ಸ್ವೀಕರಿಸಬೇಕು. ಆತ್ಮಶಕ್ತಿ ಜಾಗೃತ ಮಾಡಿಕೊಂಡು ಬದುಕಿನಲ್ಲಿ ಏನನ್ನಾದರೂ ಸಾಧಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ, ಸಂಸ್ಥೆಯ ಅಭಿವೃದ್ಧಿಗೆ ದುಡಿದವರಿಗೆ ಮತ್ತು ಸಹಕಾರ ನೀಡಿದ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಎ. ಗೋಪಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದಾನಿ ಶಶಿಪ್ರಸಾದ್ ತಮ್ಮ ತಂದೆಯ ಹೆಸರಿನಲ್ಲಿ ನಗದು ಬಹುಮಾನ ನೀಡಿದರು.
ಮುಖ್ಯ ಶಿಕ್ಷಕ ಬಿ.ಜಿ. ಚಂದ್ರಶೇಖರ್ ಅವರು ತಮ್ಮ ತಾಯಿ ದಿ. ಪಣಿಯಮ್ಮ ಮತ್ತು ತಂದೆ ದಿ. ಗಣಪಯ್ಯ ಸ್ಮಾರಕ ಪ್ರಶಸ್ತಿಯನ್ನು ಶಾಲೆಯ ಕ್ರೀಡಾಪಟುಗಳಿಗೆ ನೀಡಿದರು.
ಶಾಲೆಗೆ ದೇಣಿಗೆ ನೀಡಿದ ದಾನಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಬಸವಾನಂದ ಸ್ವಾಮೀಜಿ ಅವರಿಗೆ ಲೂಯಿಬ್ರೈಲ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯ್ಕುಮಾರ್, ದಾನಿ ಡೇವಿಡ್ ಪಾಲ್ ರಾಜ್, ಸಂಸ್ಥೆಯ ನಿರ್ದೇಶಕರಾದ ಗಿರಿಧರ್ ಯತೀಶ್, ಡಿ.ಎಂ. ಶಂಕರ್, ಟಿ.ಎಂ. ಚಂದ್ರಶೇಖರ್, ಕೆ. ಮೋಹನ್, ಎಂ.ಎಸ್. ನಂಜುಂಡಸ್ವಾಮಿ ಉಪಸ್ಥಿತರಿದ್ದರು. ಶಿಕ್ಷಕ ಲಕ್ಷ್ಮಣಗೌಡ ನಿರೂಪಿಸಿದರು. ಪ್ರಾಚಾರ್ಯ ಬಿ.ಜಿ. ಚಂದ್ರಶೇಖರ್ ಸ್ವಾಗತಿಸಿದರು. ಸಂಸ್ಥೆಯ ಕಾರ್ಯದರ್ಶಿ ನಸ್ರುಲ್ಲಾ ಷರೀಫ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

