ಚಿಕ್ಕಮಗಳೂರು

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Published On :

ಕೊಪ್ಪ:  ಅತಿಥಿ ಉಪನ್ಯಾಸಕ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಸೋಮವಾರ ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರ ಸಂಘದ ಸಂಚಾಲಕ ಎಚ್.ಸಿ. ಪ್ರಕಾಶ್ ಮಾತನಾಡಿ, ಹಿಂದಿನ ಹಾಗೂ ಈಗಿನ ಸರ್ಕಾರಗಳೆರಡು ಅತಿಥಿ ಉಪಾನ್ಯಾಸಕರ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಕಾಲಕಾಲಕ್ಕೆ ವೇತನೆ ನೀಡದೆ ಪ್ರತಿಭಟಿಸಿದಾಗ ಸ್ಪಂದಿಸಿದಂತೆ ಮಾಡಿ ಮರೆತು ಬಿಡುವ ಸರ್ಕಾರದ ಕ್ರಮವನ್ನು ಖಂಡಿಸಿದರು.
ಬರೀ 8000:  ರಾಜ್ಯದಲ್ಲಿ 10600 ಅತಿಥಿ ಉಪನ್ಯಾಸಕರಿಗೆ ಕಳೆದ 5 ತಿಂಗಳಿನಿಂದ ವೇತನ ನೀಡಿಲ್ಲ. ವೇತನ ಪರಿಷ್ಕರಣೆ ಮಾಡುವ ಭರವಸೆ ನೀಡಿದ್ದ ಹೊಸ ಸರ್ಕಾರ ಘೋಷಣೆಗಷ್ಟೆ ಸೀಮಿತವಾಗಿದೆ. ಕೇರಳ, ತಮಿಳುನಾಡುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಮಾಸಿಕ 22000 ರಿಂದ 25000 ವೇತನವಿದೆ. ರಾಜ್ಯದಲ್ಲಿ ಕೇವಲ 8000ಕ್ಕೆ ಅತಿಥಿ ಉಪನ್ಯಾಸಕರು ದುಡಿಯುತ್ತಿದ್ದರೂ ಕಾಲಕಾಲಕ್ಕೆ ವೇತನ ನೀಡುತ್ತಿಲ್ಲ ಎಂದು ದೂರಿದರು.
ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಿ ಅರ್ಹತೆ ಆಧಾರದಲ್ಲಿ ನೇಮಕಾತಿ ಕೈಗೊಂಡ ರಾಜ್ಯ ಸರ್ಕಾರ ಕ್ರಮ ಸ್ವಾಗತಾರ್ಹವಾಗಿದೆ. ಆದರೂ, ಸರ್ಕಾರಿ ಕಾಲೇಜುಗಳನ್ನು ಅವಲಂಬಿಸಿರುವ ಬಡವರ್ಗದ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಅತಿಥಿ ಉಪನ್ಯಾಸಕರ ವೇತನವನ್ನು ಯುಜಿಸಿ ನಿಯಮದಂತೆ ಬಿಡುಗಡೆ ಮಾಡಲು ಒತ್ತಾಯಿಸಿದರು.
ಇಲ್ಲಿನ ಪ್ರಥಮ ದರ್ಜೆ ಕಾಲೇಜು ಆವರಣದಿಂದ ತಹಸೀಲ್ದಾರ್ ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದು ಬೇಡಿಕೆ ಒತ್ತಾಯಿಸುವ ಮನವಿಯನ್ನು ಉಪತಹಸೀಲ್ದಾರ್ ಶೈಲಜಾ ಅವರಿಗೆ ನೀಡಲಾಯಿತು.
ಧರಣಿಯಲ್ಲಿ ಅತಿಥಿ ಉಪಾನ್ಯಾಸಕರ ಸಂಘದ ಪದಾಧಿಕಾರಿಗಳಾದ ಶ್ರೀವತ್ಸ, ಅವಿನಾಶ್, ನಾಗರಾಜ್, ಮಮತಾ, ಭವ್ಯಾ, ಅರ್ಚನಾ, ಮಾಲತಿ ಹಾಗೂ ಲತಾ, ಮಾದೇಶ್ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.