ಚಿಕ್ಕಮಗಳೂರು

ಒತ್ತುವರಿ ತೆರವಿಗೆ ಪ್ರಮಾಣಪತ್ರ ಸಲ್ಲಿಸಿಲ್ಲ

Published On :

ಚಿಕ್ಕಮಗಳೂರು: ಒತ್ತುವರಿಯನ್ನು ತೆರವುಗೊಳಿಸುವುದಾಗಿ ಈಗಿನ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿಲ್ಲ ಎಂದು ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ತಾಲೂಕಿನ ಮಲ್ಲಂದೂರು ಗ್ರಾಮದಲ್ಲಿ ಕಾಫಿ ಬೆಳೆಗಾರರ ಹಿತರಕ್ಷಣಾ ಸಮಿತಿ ಬುಧವಾರ ಏರ್ಪಡಿಸಿದ್ದ ಸಂಸದರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2011ರಲ್ಲಿ ಆಗಿನ ರಾಜ್ಯ ಸರ್ಕಾರ ಒತ್ತುವರಿ ತೆರವುಗೊಳಿಸುವುದಾಗಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿತ್ತು ಎಂದರು.
ಅದ್ದರಿಂದ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಒತ್ತುವರಿ ತೆರವುಗೊಳಿಸುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
ಜನರ ಹಿತಕ್ಕೆ ಸರ್ಕಾರ ಬದ್ಧ: ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಹೆಚ್ಚಿನ ವಿವರವನ್ನು ನೀಡಲು ಆಗುತ್ತಿಲ್ಲ. ಬೆಳೆಗಾರರ ಸಹಾಯಕ್ಕೆ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಜನರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಇದಕ್ಕೆ ಕಾಲಾವಕಾಶ ಬೇಕು ಎಂದು ಹೇಳಿದರು.
ಒತ್ತುವರಿ ತೆರವಿಗೆ ಮುಂದಾದರೆ ಮುಂದಿನ ದಿನಗಳಲ್ಲಿ ಬದುಕು ನಡೆಸುವುದು ಕಷ್ಟವಾಗಲಿದೆ. ಇದರಿಂದಾಗಿ ನೂರಾರು ಕುಟುಂಬಗಳು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಅದುದರಿಂದ ಸರ್ಕಾರ ನೆರವಿಗೆ ಬರಬೇಕೆಂದು ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಮನವಿ ಮಾಡಿದರು.
ಸಂವಾದದಲ್ಲಿ ಕಾಫಿ ಬೆಳೆಗಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಉತ್ತಮ್ ಗೌಡ, ಕೆಜಿಎಫ್ ಮಾಜಿ ಅಧ್ಯಕ್ಷ ಅತ್ತಿಕಟ್ಟೆ ಜಗನ್ನಾಥ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿರಾಜ್ ನಾರಾಯಣ್, ತಹಸೀಲ್ದಾರ್ ಶಿವೇಗೌಡ, ಹೊಲದಗದ್ದೆ ಗಿರೀಶ್ ಉಪಸ್ಥಿತರಿದ್ದರು.
ಬೆಳೆಗಾರರ ಸಮಸ್ಯೆ; ಸಂವಾದಕ್ಕೂ ಮುನ್ನ ನಡೆದ ಸಭೆಯಲ್ಲಿ ಕಾಫಿ ಬೆಳೆಗಾರರು ಹಲವು ಸಮಸ್ಯೆಗಳ ಕುರಿತು ಸಂಸದರ ಗಮನ ಸೆಳೆದರು. ಕಾಫಿ ಬೆಳೆಗಾರರ ಸಮಸ್ಯೆ ಏನೆಂದು ಎಲ್ಲೋ ಕುಳಿತ ಅಧಿಕಾರಿಗಳಿಗೆ ತಿಳಿಯುವುದಿಲ್ಲ. ಒತ್ತುವರಿಗೆ ಸಂಬಂಧಿಸಿದಂತೆ ಡಾ. ಬಾಲಸುಬ್ರಹ್ಮಣ್ಯಂ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಮಾದವ ಗಾಡ್ಗೀಳ್ ಪಶ್ಚಿಮಘಟ್ಟ ಸಂರಕ್ಷಿತ ಪ್ರದೇಶವೆಂದು ಘೋಷಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದಾರೆ.
ಈ ಎಲ್ಲಾ ವರದಿಗಳು ಕಾಫಿ ಬೆಳೆಗಾರರ ಮೇಲೆ ದುಷ್ಪರಿಣಾಮ ಬೀರಲಿವೆ ಎಂದು ಕೆಜಿಎಫ್ ಮಾಜಿ ಅಧ್ಯಕ್ಷ ಡಾ. ಎನ್.ಕೆ. ಪ್ರದೀಪ್ ಹೇಳಿದರು.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಕಿಸಾನ್ ಘಟಕದ ಉಪಾಧ್ಯಕ್ಷ ಸಚಿನ್ ಮೀಗಾ, ಜೆಡಿಎಸ್ ಮುಖಂಡ ದೇವರಾಜ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.