ಆರ್ಥಿಕ ಸ್ವಾವಲಂಬನೆಗೆ ಧ.ಗ್ರಾ. ಯೋಜನೆ ಪೂರಕ
ಕ.ಪ್ರ.ವಾರ್ತೆ, ಕೊಪ್ಪ, ಜ.30
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಪ್ರದೇಶದ ಜನರಿಗೆ ಸ್ವಉದ್ಯೋಗಕ್ಕೆ ಸಹಕಾರ ನೀಡುವುದರೊಂದಿಗೆ ಆರ್ಥಿಕ ಸ್ವಾವಲಂಬನೆ ಕಲ್ಪಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಮಾಜಿ ಜಿಪಂ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರೀ ಕ್ರೀಡಾಂಗಣದಲ್ಲಿ ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪ ವಲಯದ ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಹಮ್ಮಿಕೊಂಡಿದ್ದ ವಲಯ ಮಟ್ಟದ ಸಾಧನಾ ಸಮಾವೇಶ ಮತ್ತು ಕ್ರೀಡಾಕೂಟ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.
ಮಾದರಿ ಕಾರ್ಯ: ಗ್ರಾಮೀಣ ಪ್ರದೇಶದಲ್ಲಿ ಊದುಬತ್ತಿ ತಯಾರಿಕೆ, ಹೈನುಗಾರಿಕೆಗಳಂತಹ ಸ್ವಉದ್ಯೋಗಗಳಿಗೆ ಅರ್ಥಿಕ ನೆರವು ನೀಡುವುದಲ್ಲದೆ, ಮಹಿಳೆ ಮತ್ತು ಪುರುಷರಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರೀಕ್ಷೇತ್ರದ ಧರ್ಮಾಧಿಕಾರಿಗಳು ಶ್ರಮಿಸುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದರು.
ನೈರ್ಮಲ್ಯ: ತಾಪಂ ಉಪಾಧ್ಯಕ್ಷ ಪೂರ್ಣಚಂದ್ರ ಮಾತನಾಡಿ, ಶ್ರೀಕ್ಷೇತ್ರಾಭಿವೃದ್ಧಿ ಯೋಜನೆ ಸಮಾಜದ ಧರ್ಮಬೇಧವಿಲ್ಲದೇ ಎಲ್ಲರೂ ಒಂದೇ ಎಂದು ಭಾವಿಸಿ ಅವರಿಗೆ ಸ್ವಉದ್ಯೋಗಕ್ಕೆ ಅರ್ಥಿಕ ನೆರವು ನೀಡಿ ಅರ್ಥಿಕ ಸ್ವಾವಲಂನೆ ನೀಡುವುದರೊಂದಿಗೆ ಗ್ರಾಮಾಂತರ ಪ್ರದೇಶದ ನೈರ್ಮಲ್ಯದ ಬಗ್ಗೆ ಅಪಾರವಾದ ಕಾಳಜಿ ತೋರಿ ನಿರ್ಮಲ ಗ್ರಾಮ ನಿರ್ಮಾಣ ಮಾಡಲು ಶ್ರಮಿಸುತ್ತಿದೆ ಎಂದರು. ಸಭೆ ಅಧ್ಯಕ್ಷತೆಯನ್ನು ಕೊಪ್ಪ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ರಾಧಾಗೌಡ ವಹಿಸಿದ್ದರು. ಒಕ್ಕೂಟದ ಮುಖ್ಯಸ್ಥರಾದ ಇಂದಿರಮ್ಮ, ಸುಬ್ಬೋಜಿ, ರಾಧಾಕೃಷ್ಣ, ಯೋಜನೆಯ ಮುಖ್ಯಸ್ಥ ಅಣ್ಣಪ್ಪ ಮತ್ತಿತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

