ಚಿಕ್ಕಮಗಳೂರು

ಅಭಿವೃದ್ಧಿ ಕಾರ್ಯಗಳಿಗೆ ಅಧಿಕಾರವೇ ಮಾನದಂಡವಾಗದಿರಲಿ: ರಂಗನಾಥ್

Published On :

ಕ.ಪ್ರ.ವಾರ್ತೆ, ಶೃಂಗೇರಿ, ಜ31
ಅಭಿವೃದ್ಧಿ ಕಾರ್ಯಗಳಿಗೆ ಅಧಿಕಾರವೊಂದೇ ಮಾನದಂಡವನ್ನಾಗಿ ಸ್ವೀಕರಿಸದೆ ಉತ್ತಮ ಮನಸ್ಸು, ಚಿಂತನೆಗಳನ್ನೂ ಪರಿಗಣಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎಸ್. ರಂಗನಾಥ್ ತಿಳಿಸಿದರು.
ತಾಲೂಕು ಪಂಚಾಯಿತಿ ಆವರಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಎನ್‌ಎಂಆರ್ ಸೃಜನ ಯೋಜನೆ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನರ ಸಹಕಾರ,ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನ, ಜನಪ್ರತಿನಿಧಿಗಳ ಪ್ರಯತ್ನವೂ ಮುಖ್ಯವಾಗಿದೆ. ಜನರು ಗ್ರಾಮಸಭೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಉದ್ಯೋಗ ಖಾತ್ರಿ ಯೋಜನೆ ಆರಂಭದ ದಿನಗಳಲ್ಲಿ ತಾಲೂಕಿನಲ್ಲಿ ಯಶಸ್ವಿಯಾಗದು ಎಂಬ ಭಾವನೆಗಳಿದ್ದರೂ ನಂತರದ ದಿನಗಳಲ್ಲಿ ಅದು ಹೆಚ್ಚು ಪರಿಣಾಮಕಾರಿಯಾಗಿ ಯಶಸ್ಸು ಪಡೆದುಕೊಂಡಿತು. ಈ ಯೋಜನೆ ಆರ್ಥಿಕವಾಗಿ ದುರ್ಬಲರು, ಬಡವರ ಜೀವನೋಪಾಯಕ್ಕೆ ದಾರಿದೀಪವಾಯಿತು ಎಂದರು.
ಜಿಪಂ ಸದಸ್ಯ ಶೃಂಗೇರಿ ಶಿವಣ್ಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಪಂ ಅಧ್ಯಕ್ಷೆ ಶಾರದಾ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭ ವೈಯಕ್ತಿಕ ಫಲಾನುಭವಿಗಳಿಗೆ ಕಾಮಗಾರಿ ಆರಂಭಿಸಲು ಅನುಮತಿ ನೀಡುವ ಕಾರ್ಯಾದೇಶ ಪತ್ರ ವಿತರಿಸಲಾಯಿತು.
ತಾಪಂ ಇಒ ಶ್ರೀಕೃಷ್ಣ, ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು. ಗಣೇಶ್ ಶೆಟ್ಟಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.