ಚಿಕ್ಕಮಗಳೂರು

ಪಶು ಆಸ್ಪತ್ರೆಗೆ ಶಾಸಕರ ದಿಢೀರ್ ಭೇಟಿ

Published On :

ತರೀಕೆರೆ: ಪಟ್ಟಣದ ಪಶು ಆಸ್ಪತ್ರೆಗೆ ಶಾಸಕ ಜಿ.ಎಚ್. ಶ್ರೀನಿವಾಸ್ ಶುಕ್ರವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಕಾರ್ಯ ವೈಖರಿ ಪರಿಶೀಲಿಸಿದರು.
ಆಸ್ಪತ್ರೆ ವೈದ್ಯರ ಮತ್ತು ಸಿಬ್ಬಂದಿ ಹಾಜರಿ ಪುಸ್ತಕ ಪರಿಶೀಲಿಸಿದರು. ಆಸ್ಪತ್ರೆ ಅವರಣದಲ್ಲಿ 26.25 ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಹೊಸ ವೆಟರ್ನರಿ ಆಸ್ಪತ್ರೆ ಸ್ಥಳ ಪರಿಶೀಲಿಸಿದರು. ಆಸ್ಪತ್ರೆಗೆ ನೂತನ ಸಂಚಾರಿ ಆಸ್ಪತ್ರೆ ವಾಹನ ಮಂಜೂರಾಗಿದೆ. ಶೀಘ್ರದಲ್ಲೇ ಸೇವೆ ಆರಂಭವಾಗಲಿದೆ ಎಂದು ತಿಳಿಸಿದರು.
1 ಲಕ್ಷ ಡೋಸೇಜ್:  ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ.ಕೊಟ್ರೇಶಪ್ಪ ಮಾತನಾಡಿ, ಜಾನುವಾರುಗಳಿಗೆ ಕಾಲು ಬಾಯಿಜ್ವರಕ್ಕೆ ನೀಡಲು 1 ಲಕ್ಷ ಡೋಸೇಜ್ ಸರಬರಾಜಾಗಿದೆ. ಫೆ.15 ರಿಂದ ಮಾ.15 ರವರೆಗೆ 1 ತಿಂಗಳ ಕಾಲ ತಾಲೂಕಿನಾದ್ಯಂತ ಜಾನುವಾರುಗಳಿಗೆ ಔಷಧ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಪ್ರವೀಣ್ ನಾಹರ್ ಡಾ.ಪ್ರಭಾಕರ್, ಪಶು ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.