ಸಮಾವೇಶಕ್ಕೆ 3000 ಕಾರ್ಯಕರ್ತರು
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಜ.31
ತುಮಕೂರಿನಲ್ಲಿ ಫೆ.23ರಂದು ನಡೆಯುವ ಬಿಜೆಪಿ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡ, ಸ್ಲಂ ಮೋರ್ಚಾದ ಕಾರ್ಯಕರ್ತರ ಸ್ವಾಭಿಮಾನಿ ಸಮಾವೇಶಕ್ಕೆ ಜಿಲ್ಲೆಯಿಂದ ಸುಮಾರು 3000 ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಸಮಾವೇಶ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಕನಕರಾಜ್ ಅರಸ್, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ವೆಂಕಟೇಶ್ ನೇತೃತ್ವದ ತಂಡ ಕಡೂರು ಮತ್ತು ತರೀಕೆರೆ ಮಂಡಲಕ್ಕೂ ಮಾಜಿ ಸಿಡಿಎ ಅಧ್ಯಕ್ಷ ಬಿ.ರಾಜಪ್ಪ, ಎನ್.ಕೇಶವ್, ಕೆ.ಎಸ್. ಪುಷ್ಪರಾಜ್ ಅವರ ತಂಡ ಎನ್.ಆರ್.ಪುರ, ಕೊಪ್ಪ, ಶೃಂಗೇರಿ ಮಂಡಲಗಳಲ್ಲಿ ಪ್ರವಾಸ ಮಾಡಿ ಸ್ಥಳೀಯ ಮೇಲ್ಕಂಡ ವರ್ಗಗಳ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆದ ಸಭೆಯಲ್ಲಿ ಬಿ.ರಾಜಪ್ಪ ಮಾತನಾಡಿ, ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡದ ಕಾರ್ಯಕರ್ತರಿಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸೂಕ್ತ ಸ್ಥಾನಮಾನಗಳನ್ನು ನೀಡಿರುತ್ತದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಮೇಲ್ಕಂಡ ವರ್ಗದ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗಿರುವುದರಿಂದ ಜಿಲ್ಲೆಯಲ್ಲಿ ಮೇಲ್ಕಂಡ ವರ್ಗದ ಸಂಪೂರ್ಣ ಬೆಂಬಲ ಪಕ್ಷಕ್ಕೆ ಇರುವುದು ಸಾಬೀತಾಗಿದೆ. ಇನ್ನು ಮುಂದೆಯೂ ಸಹ ಮೇಲ್ಕಂಡ ವರ್ಗಗಳ ಸಹಕಾರವೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ದೊರಕಲು ಸಂಬಂಧಪಟ್ಟ ಕಾರ್ಯಕರ್ತರು ಶ್ರಮಿಸಬೇಕೆಂದು ತಿಳಿಸಿದರು.
ಈ ನಿಟ್ಟಿನಲ್ಲಿ ಸಮಾವೇಶವನ್ನು ಯಶಸ್ವಿಗೊಳಿಸುವ ಈ ದೃಷ್ಟಿಯಿಂದ ಫೆ.1ರಂದು ಮಾಜಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ರಾಜ್ಯ ಕಾರ್ಯದರ್ಶಿ ಶ್ಯಾಮಲಾ ಕುಂದರ್, ಮುಖಂಡರಾದ ಜಿ.ಎನ್. ನಂಜುಂಡಸ್ವಾಮಿ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬೆಳಗ್ಗೆ 11 ಗಂಟೆಗೆ ಚಿಕ್ಕಮಗಳೂರಿನ ಜಿಲ್ಲಾ ಬಿಜೆಪಿಯಲ್ಲಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಕ್ಷೇತ್ರ ವಕ್ತಾರರಾದ ಕೆ.ಎಸ್. ಪುಷ್ಪರಾಜ್ ತಿಳಿಸಿದ್ದಾರೆ.
ಸ್ವಾಭಿಮಾನಿ ಸಮಾವೇಶದ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ಇತ್ತೀಚೆಗೆ ಬಿಜೆಪಿ ಪೂರ್ವಭಾವಿ ಸಭೆ ಇತ್ತೀಚೆಗೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

