'ಹಲಸು ಪದಾರ್ಥಕ್ಕೆ ಉತ್ತಮ ಬೇಡಿಕೆ'
ಶೃಂಗೇರಿ: ವಿಕಸನ ಸಂಸ್ಥೆ, ನಬಾರ್ಡ್, ಸೃಷ್ಟಿ ರೈತಮಿತ್ರ ಕೂಟ ಹಾಗೂ ತಾರೋಳ್ಳಿಕೊಡಿಗೆ ಮಂಜುಶ್ರೀ ರೈತ ಮಿತ್ರ ಕೂಟ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗಿರಿಜನ ಫಲಾನುಭವಿಗಳಿಗಾಗಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಬಿ. ಶಿವಶಂಕರ್, ಶಿಬಿರದ ಸದುಪಯೋಗ ಪಡೆದುಕೂಳ್ಳಬೇಕು. ಸರ್ಕಾರ ಗಿರಿಜನರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿ ಸವಲತ್ತುಗಳನ್ನು ಕಲ್ಪಿಸಿಕೊಡುತ್ತಿದೆ ಎಂದು ಹೇಳಿದರು.
ಸ್ಥಳೀಯ ಉತ್ಪನ್ನಗಳನ್ನು ಬಳಸಿಕೊಂಡು ಅವುಗಳನ್ನು ಸಿದ್ಧಪಡಿಸಿ ಮಾರುಕಟ್ಟೆಗೆ ತರುವುದರ ಮೂಲಕ ಉದ್ಯೋಗ ಸೃಷ್ಟಿಸಿಕೊಳ್ಳಬಹುದಾಗಿದೆ. ಹಲಸು, ಸೀಗೆ ಮೊದಲಾದ ಸ್ಥಳೀಯ ಉತ್ಪನ್ನಗಳು ಲಾಭದಾಯಕವಾಗಿವೆ. ಹಲಸು ಬಹು ಉಪಯುಕ್ತ ಪದಾರ್ಥವಾಗಿದೆ. ಇದರಿಂದ ಅನೇಕ ಪದಾರ್ಥಗಳನ್ನು ತಯಾರಿಸಬಹುದಾಗಿದ್ದು, ಅವುಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ ಎಂದು ಮಾಹಿತಿ ನೀಡಿದರು.
ಶೃಂಗೇರಿ ತಾಲೂಕು ಮಣ್ಣು ಪರೀಕ್ಷಾ ಕೇಂದ್ರದ ವಿಜ್ಞಾನಿ ಶಿವಣ್ಣ ಹಲಸು, ಮೌಲ್ಯವರ್ದಿತ ಉತ್ಪನ್ನಗಳ ಬಗ್ಗೆ ತಿಳಿಸಿದರು. ವಿಕಸನ ಸಂಸ್ಥೆಯ ಯೋಜನಾ ಸಂಯೋಜಕ ರವಿಚಂದ್ರ, ತಾಲೂಕು ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ನೂತನ್‌ಕುಮಾರ್, ವಿಜ್ಞಾನಿ ನಿರಂಜನ, ರಮೇಶ್ ಎಚ್.ಎಚ್, ರೋಹಿತ್ ವಿ.ಟಿ. ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

