8.40 ಕೋಟಿ ಕ್ರಿಯಾ ಯೋಜನೆಗೆ ತಡೆ: ಕ್ರಮಕ್ಕೆ ಆಗ್ರಹ
ಕ.ಪ್ರ.ವಾರ್ತೆ, ಮೂಡಿಗೆರೆ, ಜ.31
ಮಲೆನಾಡು ಭಾಗದಲ್ಲಿ ಕುಡಿಯುವ ನೀರಿನ ಯೋಜನೆ, ರಸ್ತೆ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಸರ್ಕಾರದ ಹಣ ಬಿಡುಗಡೆ ಆದರೂ. ಜಿಪಂ ಕಾರ್ಯಪಾಲಕ ಅಭಿಯಂತರರು ಯಾವುದೇ ಅಭಿವೃದ್ಧಿಪಡಿಸದೇ ಹಣವನ್ನು ಹಿಂದಿರುಗಿಸುವ ಹುನ್ನಾರ ನಡೆಸಿದ್ದಾರೆ. ಅಲ್ಲದೆ, ಮೂಡಿಗೆರೆ ಅಭಿವೃದ್ಧಿಗೆ ತಡೆಯೊಡ್ಡುತ್ತಿದ್ದಾರೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಎಂ.ಎ.ಶೇಷಗಿರಿ ಆರೋಪಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಿ.ಬಿ. ನಿಂಗಯ್ಯ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಸಮಯದಲ್ಲಿ ಮೂಡಿಗೆರೆ ತಾಲೂಕಿನ ಕುಡಿಯುವ ನೀರಿನ ಯೋಜನೆಗೆ 8.40 ಕೋಟಿ ಕ್ರಿಯಾ ಯೋಜನೆ ತಯಾರಾಗಿದ್ದರು. ಅದನ್ನು ತಡೆ ಹಿಡಿದಿದ್ದಾರೆ. ಈ ಬಗ್ಗೆ ತಾವು, ಜಿಪಂ ಮತ್ತು ತಾಪಂ ಸದಸ್ಯರು ವಿಚಾರಿಸಿದಾಗ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ ಎಂದು ಉಡಾಫೆ ಉತ್ತರ ನೀಡಿದ್ದಾರೆ ಎಂದರು.
ಶಿಸ್ತು ಕ್ರಮಕ್ಕೆ ಮನವಿ: ಜನಪ್ರತಿನಿಧಿಗಳನ್ನು ಕೀಳಾಗಿ ಕಾಣುತ್ತಿರುವ ಅವರು, ಈ ಬಾರಿಯು ಜಿಪಂ ರಸ್ತೆ ಅಭಿವೃದ್ಧಿಗೆ 10 ಕೋಟಿ ಕ್ರಿಯಾಯೋಜನೆ ದೊರೆತಿದೆ. ಆದರೆ ಜಿಪಂ ಕಾರ್ಯಪಾಲಕ ಅಭಿಯಂತರರು ರಸ್ತೆ ಅಭಿವೃದ್ಧಿಗೆ ಅಡ್ಡಿಪಡಿಸಿದ್ದಾರೆ. ಮಲೆನಾಡನ್ನು ಅಭಿವೃದ್ಧಿ ವಂಚಿತರನ್ನಾಗಿಸುವ ಹುನ್ನಾರ ನಡೆಸುತ್ತಿದ್ದಾರೆ. ಇವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವಂತೆ ಮನವಿ ಮಾಡಿದರು.
ಶಾಸಕ ಬಿ.ಬಿ.ನಿಂಗಯ್ಯ ಮಾತನಾಡಿ. ಜನರಿಂದ ಆರಿಸಿ ಬಂದಂತಹ ಸದಸ್ಯರಿಗೆ ಅವಮಾನ ಮಾಡುವ ಅಧಿಕಾರಿಗಳ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳ ಮತ್ತು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಈ ಹಿಂದೆ ಯೋಜನೆ ಹೆಸರಿನಲ್ಲಿ ಹಣ ಬಿಡುಗಡೆ ಮಾಡಿಕೊಂಡು ಅಸಮರ್ಪಕವಾಗಿ ಕಾಮಗಾರಿಗಳನ್ನು ನಡೆಸಿದ್ದರೆ ಅಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವುದು. ಕಾಮಗಾರಿ ನಡೆಸದೆ ಸುಳ್ಳು ಬಿಲ್ಲನ್ನು ಮಾಡಿದರೆ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತನಿಖೆಗೆ ಒತ್ತಾಯ: ತಾಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ರಂಜನ್ ಅಜಿತ್ಕುಮಾರ್, ಎ.ಜೆ.ಸುಬ್ರಾಯಗೌಡ, ಹಿತ್ಲಮಕ್ಕಿ ರಾಜೇಂದ್ರ , ಸಬ್ಲೀ ದೇವರಾಜ್ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸುವಂತೆ ಮತ್ತು ಕಳಪೆ ಕಾಮಗಾರಿ ನಡೆಸಿದವರ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯಿಸಿದರು.
ಜಿಪಂ ಸದಸ್ಯ ವಿ.ಕೆ. ಶಿವೇಗೌಡ, ಎಂ.ಎಸ್. ಅನಂತು, ಅರೇಕುಡಿಗೆ ಶಿವು, ಜ್ಯೋತಿ ಹೇಮಾ ಶೇಖರ್, ಕವಿತಾಬಿ, ಚಂದ್ರು, ಕಾರ್ಯನಿರ್ವಹಣಾಧಿಕಾರಿ ಚಂದ್ರಮೌಳಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತಾ.ಪಂ. ಸದಸ್ಯರು, ಅಧಿಕಾರಿಗಳು, ಗ್ರಾಮ ಪಂಚಾಯಿತ್ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪಿಡಿಒಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

