ಚಿಕ್ಕಮಗಳೂರು

ಅಕ್ಷರ ದಾಸೋಹ, ಕ್ಷೀರಭಾಗ್ಯಕ್ಕೆ ಚಾಲನೆ

Published On :

ಬಾಳೆಹೊನ್ನೂರು: ಶ್ರೀಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀಜಗದ್ಗುರು ರುದ್ರಮುನೀಶ್ವರ ವಸತಿ ಪ್ರೌಢಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಗೆ ಬಾಳೆಹೊನ್ನೂರು ಶ್ರೀರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಶುಕ್ರವಾರ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಶ್ರೀಗಳು, ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಮಧ್ಯದಲ್ಲಿ ಶಾಲೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಿರುವುದನ್ನು ತಡೆಗಟ್ಟುವ ಉದ್ದೇಶ ಮತ್ತು ಎಲ್ಲರೂ ವಿದ್ಯಾವಂತರಾಗಬೇಕೆಂಬ ಸದುದ್ದೇಶದಿಂದ ಪ್ರಾರಂಭಗೊಂಡ ಈ ಯೋಜನೆಯು ಮೆಚ್ಚುವ ಹಾಗಿದೆ. ಇದರ ಸದುಪಯೋಗವನ್ನು ಆಯಾ ಭಾಗದ ಜನರು ಪ್ರಯೋಜನ ಪಡೆದುಕೊಳ್ಳಬೇಕಾಗಿದೆ ಎಂದು ನುಡಿದರು.
ಅಕ್ಷರ ದಾಸೋಹದ ಮರುಳಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ, ತಾಲೂಕು ಪಂಚಾಯತಿ ಸದಸ್ಯೆ ಹೇಮಲತಾ, ಗ್ರಾಪಂ ಸದಸ್ಯೆ ಲಲಿತಮ್ಮ, ಶಾಲಾ ಮುಖ್ಯೋಪಾಧ್ಯಾಯ ಸದಾನಂದ ಹಾಗೂ ಸಹ ಶಿಕ್ಷಕರು ಹಾಗೂ ಶ್ರೀ ರಂಭಾಪುರೀ ಪೀಠದ ಲೆಕ್ಕಾಧಿಕಾರಿ ಸಂಕಣ್ಣನವರ ಉಪಸ್ಥಿತರಿದ್ದರು.
ಮಾ.12ರಿಂದ 16ರ ವರೆಗೆ ಜರುಗಲಿರುವ ಜಾತ್ರಾ ಮಹೋತ್ಸವದ ಪ್ರಥಮ ಪ್ರಕಟಣೆಯನ್ನು ಶ್ರೀರಂಭಾಪುರೀ ಜಗದ್ಗುರುಗಳು ಬಿಡುಗಡೆ ಮಾಡಿದರು. ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.