ಚಿಕ್ಕಮಗಳೂರು

ಭ್ರಷ್ಟ ವ್ಯವಸ್ಥೆ ಸರಿಪಡಿಸಲು ಪತ್ರಕರ್ತನ ಬದ್ಧತೆ ಅಗತ್ಯ: ಎಂ.ಎಲ್ ಮೂರ್ತಿ

Published On :

ಕ.ಪ್ರ.ವಾರ್ತೆ, ಮೂಡಿಗೆರೆ, ಜು.1 ಭ್ರಷ್ಟ ವ್ಯವಸ್ಥೆ ಸರಿಯಾಗಬೇಕಾದರೆ ಇದಕ್ಕೆ ಬದ್ಧತೆ ಇರುವ ಪತ್ರಕರ್ತರ ಅವಶ್ಯಕತೆಯೂ ಇದೆ. ಪತ್ರಕರ್ತ ತನ್ನಿಂದ ತಾನೇ ಬದ್ಧತೆಯನ್ನು ಬೆಳೆಸಿಕೊಂಡರೆ ಅದರಿಂದ ಸಮಾಜ ಸಾಕಷ್ಟು ಸುಧಾರಿಸಿಕೊಳ್ಳುತ್ತದೆ ಎಂದು ಜಿಲ್ಲೆಯ ರಾಜಕೀಯ ಮುಖಂಡ ಎಂ.ಎಲ್. ಮೂರ್ತಿ ತಿಳಿಸಿದರು.
ಮಂಗಳವಾರ ಪಟ್ಟಣದ ನೌಕರರ ಭವನದಲ್ಲಿ ಮೂಡಿಗೆರೆ ತಾಲೂಕು ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜಕೀಯ ಮತ್ತು ಪತ್ರಿಕೋದ್ಯಮ ವಿಷಯದ ಕುರಿತು ಅವರು ಮಾತನಾಡಿದರು.
ಮಾಧ್ಯಮಗಳು ಸಾಮಾಜಿಕ, ರಾಜಕೀಯ, ಆರ್ಥಿಕ ಸೇರಿಂದತೆ ವಿವಿಧ ಕ್ಷೇತ್ರಗಳ ನ್ಯೂನತೆ ಎತ್ತಿ ಹಿಡಿಯುವ ಕಾವಲುಗಾರರಿದ್ದಂತೆ ಎಂದ ಅವರು, ವೈಚಾರಿಕತೆ ಇಲ್ಲದ ರಾಜಕಾರಣ ಅಧಃಪತನದ ಹಾದಿ ಹಿಡಿಯುತ್ತದೆ. ಒಳ್ಳೆಯ ವ್ಯಕ್ತಿತ್ವ ಮತ್ತು ಪ್ರಾಮಾಣಿಕತೆ ಇಲ್ಲದವರು ಯಾವ ಹುದ್ದೆಯಲ್ಲಿದ್ದರೂ ಪ್ರಯೋಜನವಿಲ್ಲ ಎಂದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರ ಶೇಖರ್ ಎನ್. ತೇರದಾಳ್ ಕಾರ್ಯಕ್ರಮ ಉದ್ಘಾಟಿಸಿ, ಪತ್ರಕರ್ತ ದೇಶ ತಿದ್ದುವ ಸೋಗಿನಲ್ಲಿ ತಾವೇ ತಪ್ಪಿಗೆ ಸಿಕ್ಕಿಕೊಳ್ಳದಿರಲು ಸಾಮಾಜಿಕ ಬದ್ಧತೆ ಇರಬೇಕು ಎಂದರು.
ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಜಯಕುಮಾರ್ ಮಾತನಾಡಿದರು. ಗೃಹಮಂಡಲಿ ಮಾಜಿ ಅಧ್ಯಕ್ಷ ಹಾಲಪ್ಪಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಸುದರ್ಶನ, ಜೆಡಿಎಸ್ ಕ್ಷೇತ್ರಾಧ್ಯಕ್ಷ ಗಬ್ಬಳ್ಳಿ ಚಂದ್ರೇಗೌಡ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ಮಂಜುನಾಥ್, ಕರಾಟೆ ಚಂದ್ರು, ಮುಕ್ತಿಯಾರ್, ಸಬ್ಬೇನಹಳ್ಳಿ ಹಸನಬ್ಬ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.