ಚಿಕ್ಕಮಗಳೂರು

ಸೇವೆ ಮುಂದುವರಿಕೆಗೆ ಶಿಕ್ಷಕರ ಮನವಿ

Published On :

ಚಿಕ್ಕಮಗಳೂರು: ಜಿಲ್ಲೆಯ ನಕ್ಸಲ್ ಪೀಡಿತ ಪ್ರದೇಶದಲ್ಲಿ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ತಮ್ಮನ್ನು ಸೇವೆಯಲ್ಲಿ ಮುಂದುವರೆಸುವಂತೆ ಗುತ್ತಿಗೆ ಆಧಾರಿತ ಶಿಕ್ಷಕರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಅಪರ ಜಿಲ್ಲಾಧಿಕಾರಿ ವೈಶಾಲಿ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ಕೊಪ್ಪ, ಮೂಡಿಗೆರೆ ಹಾಗೂ ಶೃಂಗೇರಿ ತಾಲೂಕಿನ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಳೆದ ಎರಡು ವರ್ಷಗಳಿಂದ 80 ಮಂದಿ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎನ್.ಪಿ.ಟಿ. ಯೋಜನೆಯಡಿ ನೇಮಕ ಮಾಡಿಕೊಂಡು ಅದೇ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.
ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಕೆ.ಕೆ. ಭಾಗ್ಯಲಕ್ಷ್ಮಿ, ಎಂ. ವಿದ್ಯಾ, ಚೈತ್ರಾಶ್ರೀ, ಶಾಲಿನಿ ಇತರರು ಇದ್ದರು.
ರಾಜ್ಯ ಸರ್ಕಾರ ನಕ್ಸಲ್ ಪೀಡಿತ ಪ್ರದೇಶಗಳ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತುಂಬುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ (ಎನ್.ಪಿ.ಟಿ.) ಮಾತ್ರ ಈ ನೇಮಕಾತಿ ಮಾಡಲಾಗಿತ್ತು. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದರಿಂದ ತಮ್ಮನ್ನು ಈ ವರ್ಷದಲ್ಲಿ ಸೇವೆಯಿಂದ ಕೈಬಿಡುವ ಸಾಧ್ಯತೆ ಇದೆ. ಅದಕ್ಕೆ ಅವಕಾಶವಾಗಬಾರದು. ನೇಮಕಾತಿಯಲ್ಲಿ ಈಗಾಗಲೇ ಸೇವೆ ಸಲ್ಲಿಸಿರುವ ತಮಗೆ ಮೊದಲ ಆದ್ಯತೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಅತಿಥಿ ಶಿಕ್ಷಕರ ಹುದ್ದೆಗೆ ತಾವು ಅರ್ಜಿ ಸಲ್ಲಿಸಬೇಕೋ ಅಥವಾ ಬೇಡವೇ ಎಂಬ ಗೊಂದಲ ಇದೆ. ಈ ಕುರಿತು ಸ್ಪಷ್ಟ ಮಾಹಿತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಬೇಕೆಂದು ನಕ್ಸಲ್ ಪೀಡಿತ ಪ್ರದೇಶದಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಿರುವ ಶಿಕ್ಷಕರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.