ಚಿಕ್ಕಮಗಳೂರು

'ವಿದ್ಯಾರ್ಥಿಗಳು ಕಾಲೇಜು ಸೌಲಭ್ಯ ಬಳಸಿ ಉತ್ತಮ ಸಾಧಕರಾಗಿಲಿ'

Published On :

ನರಸಿಂಹರಾಜಪುರ: ವಿದ್ಯಾರ್ಥಿಗಳು ಕಾಲೇಜಿನ ಸೌಲಭ್ಯ ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಂತೆ ಭದ್ರಾವತಿ ಧರ್ಮಕ್ಷೇತ್ರದ ಫಾದರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ತಾಲೂಕಿನ ಮೆಣಸೂರು ಗ್ರಾಮದ ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತಿಸುವ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಆರ್.ಸದಾಶಿವ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಪ್ರಮುಖ ಘಟ್ಟವಾಗಿದೆ. ಈ ಸಂದರ್ಭವು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಮುನ್ನುಡಿಯಾಗುತ್ತದೆ ಎಂದರು. ಅತಿಥಿ ಕಾರ್ಮೆಲ್ ಕಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಎಲ್ಸಾ ಮರಿಯಾ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಅದನ್ನು ಸಾಕಾರಗೊಳಿಸಲು ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಇ.ಸಿ.ಶೇವಿಯಾರ್, ವ್ಯವಸ್ಥಾಪಕಿ ಏಲ್ಸಿ, ಪ್ರಾಂಶುಪಾಲೆ ಸಿಸ್ಟರ್‌ಶಾಲಿ ಉಪಸ್ಥಿತರಿದ್ದರು. ಉಪನ್ಯಾಸಕ ಆಲ್ಮಕ್ಕಿ ಸತೀಶ್ ಸ್ವಾಗತಿಸಿದರು. ಐ.ಎಂ.ರಾಜೀವ್ ನಿರೂಪಿಸಿದರು. ಟಿ.ಮಂಜುನಾಥ್ ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

-

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.