ವಿದ್ಯಾರ್ಥಿಗಳು ಸ್ವಚ್ಛತೆಗೂ ಆದ್ಯತೆ ನೀಡಲಿ: ಪೌರಾಯುಕ್ತ ನಾಗಭೂಷಣ್
ಚಿಕ್ಕಮಗಳೂರು: ವಿದ್ಯಾರ್ಥಿಗಳು ಪಾಠ- ಪ್ರವಚನದ ಜತೆಗೆ ಶಾಲಾ ಆವರಣದೊಳಗೆ ಶುಚಿತ್ವ ಕಾಪಾಡುವತ್ತ ಗಮನಹರಿಸಬೇಕು ಎಂದು ನಗರಸಭೆಯ ಪೌರಾಯುಕ್ತ ನಾಗಭೂಷಣ್ ಹೇಳಿದ್ದಾರೆ.
ನಗರದ ಟೌನ್ ಮಹಿಳಾ ಸಮಾಜದಲ್ಲಿ ಶನಿವಾರ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಕ್ಲಬ್ಗಳನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಾವು ಬಳಸುವ ಚಾಕೊಲೇಟ್ ಮತ್ತು ಬಿಸ್ಕೆಟ್ ಸೇರಿದಂತೆ ಹಲವು ತಿನಿಸುಗಳನ್ನು ತಿಂದು ಕವರ್ಗಳನ್ನು ಬೇಕಾಬಿಟ್ಟಿ ಎಸೆಯುವುದರಿಂದ ಕ್ರಿಮಿ- ಕೀಟಗಳು ಉತ್ಪತ್ತಿಯಾಗಿ ಸಮಸ್ಯೆ ಉಲ್ಬಣಿಸುತ್ತದೆ ಎಂದು ತಿಳಿಸಿದರು.
ಮಕ್ಕಳಿಗೆ ವಿದ್ಯಾರ್ಥಿ ದಿಸೆಯಲ್ಲಿಯೇ ಕಲಿಕೆಯೊಂದಿಗೆ ಸ್ವಚ್ಛತೆ ಬಗ್ಗೆ ಶಿಕ್ಷಕರು ಅರಿವು ಮೂಡಿಸುವ ಅಗತ್ಯವಿದೆ. ಮನೆ, ಶಾಲೆ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಸೊಳ್ಳೆ, ನೊಣ ಇತ್ಯಾದಿ ಕ್ರಿಮಿ- ಕೀಟಗಳು ಉತ್ಪತ್ತಿಯಾಗಿ ರೋಗ ರುಜಿನಗಳಿಗೆ ನಾವೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದರು.
ಆಡಳಿತ ಮಂಡಳಿ ಅಧ್ಯಕ್ಷೆ ಶಾಂತಿ ಶ್ರೀನಿವಾಸ ಮಾತನಾಡಿದರು. ವಿದ್ಯಾರ್ಥಿ ನಾಯಕನಾಗಿ ಋತ್ವಿಕ್, ನಾಯಕಿಯಾಗಿ ಕೆ.ಎಸ್. ಪಾರ್ವತಿ ಆಯ್ಕೆಯಾದರು. ಕನ್ನಡ, ವಿಜ್ಞಾನ, ಸಾಂಸ್ಕೃತಿಕ, ಆರೋಗ್ಯ ಮತ್ತು ಕ್ರೀಡಾ ಸಂಘವನ್ನು ರಚಿಸಲಾಯಿತು. ಸಮಾರಂಭದ ಅಂಗವಾಗಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ಸಂಸ್ಥೆ ಕಾರ್ಯದರ್ಶಿ ಗೀತಾ ಮೂರ್ತಿ, ನಿರ್ದೇಶಕರಾದ ಸುಧಾ ಸುಬ್ರಹ್ಮಣ್ಯ, ಮೀರಾ ರಂಗನಾಥ್, ಮುಖ್ಯೋಪಾಧ್ಯಾಯರಾದ ವಿಕ್ಟರ್ ಲೋಬೋ, ಅನಿತಾ ನಾಗೇಶ್, ಶಾರದಮ್ಮ ವೇದಿಕೆಯಲ್ಲಿದ್ದರು. ವಿದ್ಯಾರ್ಥಿಗಳಾದ ಬಿಂದು ಪ್ರಜ್ವಲ್ ಪೈ ವರದಿ ವಾಚಿಸಿದರು, ಪಾರ್ವತಿ ಸ್ವಾಗತಿಸಿ, ಋತ್ವಿಕ್, ಸಿಂಧು ನಿರೂಪಿಸಿ, ದೀಕ್ಷಿತಾ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

