ನಾಗರಾಜ್ಗೆ ಸಿಡಿಎ ಅಧ್ಯಕ್ಷ ಸ್ಥಾನಕ್ಕೆ ಆಗ್ರಹ
ಚಿಕ್ಕಮಗಳೂರು: ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಕೆ.ಎಂ. ನಾಗರಾಜ್ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡುವಂತೆ ವಿವಿಧ ಸಂಘಟನೆಗಳ ಮುಖಂಡರು ವಿಧಾನಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡರಿಗೆ ಮನವಿ ನೀಡಿ ಒತ್ತಾಯಿಸಿದ್ದಾರೆ.
ಮಹಿಳೆಯರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ನೂರಾರು ಜನ ಅಭಿಮಾನಿಗಳು ಭಾನುವಾರ ನಗರದ ಅಜಾದ್ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿ ಗಾಯಿತ್ರಿ ಶಾಂತೇಗೌಡರ ಗೃಹ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಈ.ಎಚ್. ಈಶ್ವರ್ ಮಾತನಾಡಿ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಡಿವಾಳ ಜನಾಂಗದ ಮತದಾರರಿದ್ದು, ಹಿಂದಿನಿಂದಲೂ ಅನೇಕ ಮುಖಂಡರು ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ನಮ್ಮ ಜನಾಂಗ ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಅತ್ಯಂತ ಹಿಂದುಳಿದಿದ್ದು, ಸರ್ಕಾರದಿಂದ ಇದುವರೆಗೂ ಸೂಕ್ತ ಸ್ಥಾನಮಾನ ನೀಡಿ ಗುರುತಿಸಿಲ್ಲ. ಕೆ.ಎಂ. ನಾಗರಾಜ್ ಅವರು ಕಳೆದ 30 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳ ಮೂಲಕ ಪಕ್ಷ ಬಲವರ್ಧನೆಗೆ ಶ್ರಮಿಸಿ ನಗರಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಅನುಭವಿಯಾಗಿದ್ದಾರೆ ಎಂದರು.
ಮನವಿ ಸ್ವೀಕರಿಸದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್. ಶಾಂತೇಗೌಡ, ಕಾಂಗ್ರೆಸ್ನಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸಿದವರ ಸಾಲಿನಲ್ಲಿ ಕೆ.ಎಂ.ನಾಗರಾಜ್ ಕೂಡ ಓರ್ವರು ಎಂಬುದು ಸತ್ಯ. ಹಲವು ಸಂಘ- ಸಂಸ್ಥೆಗಳ ಮುಖಂಡರು ನೀಡಿರುವ ಮನವಿ ಕುರಿತು ವರಿಷ್ಠರ ಜತೆ ಚರ್ಚಿಸುತ್ತೇವೆ. ಅಧ್ಯಕ್ಷ ಗಾದಿಗೆ 55ಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲೆಯ ಎಲ್ಲ ಮುಖಂಡರು ಕುಳಿತು ಚರ್ಚಿಸಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ಶ್ರಮಿಸಿದ ಪ್ರಾಮಾಣಿಕರನ್ನು ಗುರುತಿಸಿಸುವಂತೆ ಸಲಹೆ ನೀಡುತ್ತೇವೆಂದರು.
ಜಿಲ್ಲಾ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ನಟರಾಜ್, ಕೋದಂಡರಾಮಚಂದ್ರಸ್ವಾಮಿ ದೇವಸ್ಥಾನ ಸಮಿತಿ ರಾಮಣ್ಣ, ಜಿಲ್ಲಾ ಮಡಿವಾಳ ಸಂಘದ ಕಾರ್ಯದರ್ಶಿ ರಾಮಚಂದ್ರ, ಸಿ.ಆರ್. ವೆಂಕಟೇಶ್, ವಕೀಲ ಪ್ರಶಾಂತ್, ಈಶಣ್ಣ, ದೇವಾಂಗ ಸಂಘದ ನಾರಾಯಣ, ಮೋಹನ್, ನೇಕಾರ ಸಂಘದ ಮುಖಂಡ ಸ. ಗಿರೀಶ್, ಅಗ್ರಹಾರ ಸತೀಶ್, ಕೋಟೆ ಕುಮಾರ್, ಆಟೋ ಚಾಲಕರ ಸಂಘದ ನಟರಾಜ್, ಮಹಿಳಾ ಕಾಂಗ್ರೆಸ್ನ ಶೋಭಾ, ಯಶೋಧ, ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು ಇದರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

