ಚಿಕ್ಕಮಗಳೂರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್ ಶಾ ಆಯ್ಕೆಗೆ ಸಂಭ್ರಮ

Published On :

ಕಡೂರು: ಸೇವಾ ಬದ್ಧತೆಯಿಂದ ಪಕ್ಷ ಸಂಘಟಿಸಿ ಜನರ ಮಧ್ಯದಲ್ಲಿದ್ದುಕೊಂಡು ಸಮಾಜದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುವರನ್ನು ಪಕ್ಷ ಗುರುತಿಸುತ್ತದೆ ಎಂಬುದಕ್ಕೆಅಮಿತ್ ಶಾ ಬಹುದೊಡ್ಡ ಉದಾಹರಣೆಯಾಗಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಕೆ. ಎಚ್. ಶಂಕರ್ ಹೇಳಿದರು.
ಕಡೂರು ಪಟ್ಟಣದಲ್ಲಿ ಅಮಿತ್ ಶಾ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿಯಿಂದ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಕೆಳ ಹಂತದಿಂದ ಪಕ್ಷ ಕಟ್ಟುವ ಹಾಗೂ ಸಂಘಟಿಸಿ ಹೋರಾಟದ ಮನೋಭಾವ ಮೈಗೂಡಿಸಿಕೊಂಡು ಸೇವೆ ಸಲ್ಲಿಸುವವರನ್ನು ಪಕ್ಷ ಕೈಬಿಡುವುದಿಲ್ಲ. ಇದಕ್ಕೆ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಉದಾಹರಣೆಯಾಗಿದ್ದಾರೆ ಎಂದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಎ. ಮಣಿ ಮಾತನಾಡಿ, ಪಕ್ಷದ ಕಾರ್ಯಕರ್ತರು ಹಾಗೂ ಶಕ್ತಿ ಕೇಂದ್ರಗಳು ಬರಲಿರುವ ಚುನಾವಣೆ ಎದುರಿಸುವ ಬಗ್ಗೆ ಮತ್ತು ಬರಲಿರುವ ಗ್ರಾಪಂ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಅಗತ್ಯವಿರುವ ಸಿದ್ದತೆಯ ಕುರಿತು ಮಾತನಾಡಿ ಸಲಹೆ ನೀಡಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಬಂಕ್ ಮಂಜು, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿಶಂಕರ್, ಮುಖಂಡ ಪಂಚನಹಳ್ಳಿ ಸತೀಶ್, ಅಲ್ಪಸಂಖ್ಯಾತರ ವಿಭಾಗದ ಖಾದರ್ ಭಾಷಾ (ಮುನೀರ್), ತೋಪಿಕ್ ಭಾಷಾ (ಮುನ್ನಾ), ವಿ.ಜಿ. ಅಶೋಕ್, ಎಸ್.ಜಿ. ಕೊಪ್ಪಲು ಜಗದೀಶ್, ರುದ್ರೇಶ್, ಈಶ್ವರ್, ಸುರೇಶ್, ಲೋಹಿತ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.