ಚಿಕ್ಕಮಗಳೂರು

ಜನಸಂಖ್ಯೆ ನಿಯಂತ್ರಣಕ್ಕೆ ಕಾಳಜಿ ಅಗತ್ಯ

Published On :

ಚಿಕ್ಕಮಗಳೂರು: ಜನಸಂಖ್ಯೆ ಏರಿಕೆಯಿಂದಾಗುವ ದುಷ್ಪರಿಣಾಮಗಳ ಕಡೆ ಗಮನ ಹರಿಸುವುದರ ಜೊತೆಗೆ ಜನನ ನಿಯಂತ್ರಣದ ಬಗ್ಗೆ ಕಾಳಜಿ ವಹಿಸುವುದು ಪ್ರತಿ ನಾಗರಿಕರ ಕರ್ತವ್ಯವಾಗಬೇಕು ಎಂದು ಜಿಪಂ ಅಧ್ಯಕ್ಷ ಶೃಂಗೇರಿ ಶಿವಣ್ಣ ಹೇಳಿದರು.
ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಇಂದು ಭಾರತದ ಜನಸಂಖ್ಯೆ 121 ಕೋಟಿ ದಾಟಿದ್ದು, ಕಳೆದ 10 ವರ್ಷಗಳಲ್ಲಿ 18 ಕೋಟಿ ಏರಿಕೆಯಾಗಿದೆ. ಹೀಗೆ ಮುಂದುವರೆದಲ್ಲಿ,  ಪರಿಸರ ಮಾಲಿನ್ಯಕ್ಕೆ ಕಾರಣವಾಗುವುದರ ಜೊತೆಗೆ ನೈಸರ್ಗಿಕ ವಿಕೋಪಗಳು ಹಾಗೂ ಜನರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದ ಅವರು, ಚಿಕ್ಕ ಕುಟುಂಬದ ಮಾದರಿಯನ್ನು ಅನುಸರಿಸುವುದೇ ಜನಸಂಖ್ಯಾ ನಿಯಂತ್ರಣಕ್ಕೆ ಪರಿಹಾರ ಎಂದರು.
ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಮಾತನಾಡಿದರು. ನಗರಸಭಾ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್ ಅಧ್ಯಕ್ಷತೆ ವಹಿಸಿದ್ದರು.
ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಉಮಾ ಮಹೇಶ್ವರಪ್ಪ ಉಪನ್ಯಾಸ ನೀಡಿದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಶಿವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಅಧ್ಯಕ್ಷೆ ಮೀನಾಕ್ಷಿ ಧರ್ಮಯ್ಯ, ತಾಪಂ ಉಪಾಧ್ಯಕ್ಷೆ ಸೌಮ್ಯ ಪ್ರಕಾಶ್, ಜಿಲ್ಲಾ ಸರ್ಜನ್ ಡಾ. ದೊಡ್ಡಮಲ್ಲಪ್ಪ, ಡಿಡಿಪಿಐ ರಾಜಪ್ಪ, ಡಾ. ತೀರ್ಥನಾಥ್ ಉಪಸ್ಥಿತರಿದ್ದರು.
ಪೂರ್ಣಿಮಾ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಸ್ವಾಗತಿಸಿದರು. ರಾಮಚಂದ್ರ ವಂದಿಸಿದರು, ಸಿ.ಎಂ. ಕಲಾಧರೆ ನಿರೂಪಿಸಿದರು. ನಗರದ ಹಳೇ ತಾಲೂಕು ಕಚೇರಿಯಿಂದ ವಿದ್ಯಾರ್ಥಿಗಳಿಂದ ಅರಿವಿನ ಜಾಥಾ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.