ಚಿಕ್ಕಮಗಳೂರು

ರೇಣುಕಾ ಯಲ್ಲಮ್ಮ ಸಮುದಾಯ ಭವನ ನಿರ್ಮಾಣಕ್ಕೆ ರು. 1.5 ಲಕ್ಷ ಅನುದಾನ

Published On :

ಚಿಕ್ಕಮಗಳೂರು: ಸರಕಾರ ನೀಡುವ ವಿವಿಧ ಯೋಜನೆಗಳ ಅನುದಾನ ಸದ್ಭಳಕೆ ಮಾಡಿಕೊಳ್ಳುವ ಮೂಲಕ ಅಭಿವೃದ್ಧಿ ಹೊಂದಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಹೇಳಿದರು.
ತಮ್ಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಹರಿಹರದಹಳ್ಳಿ ರೇಣುಕಾ ಯಲ್ಲಮ್ಮ ಸಮುದಾಯ ಭವನಕ್ಕೆ ಪ್ರದೇಶಾಭಿವೃದ್ಧಿಯಿಂದ ಬಿಡುಗಡೆಯಾದ ರು. 1.5 ಲಕ್ಷ ಅನುದಾನದ ಚೆಕ್ ವಿತರಿಸಿ ಮಾತನಾಡಿದರು.
ಸಮುದಾಯ ಭವನ ನಿರ್ಮಾಣಕ್ಕೆ ವಿಶೇಷ ಅನುದಾನವನ್ನು ಮುಖ್ಯಮಂತ್ರಿಗಳಿಂದ ಕೊಡಿಸುವುದಾಗಿ ಭರವಸೆ ನೀಡಿದ ಅವರು, ಸಮುದಾಯದ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕು. ಈ ಬಗ್ಗೆ ಗ್ರಾಮಸ್ಥರು ಹೆಚ್ಚಿನ ಗಮನಕೊಡಬೇಕು ಎಂದು ತಿಳಿಸಿದರು.
ಚೆಕ್ ಸ್ವೀಕರಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಂ. ಕುಮಾರ್ ಕೃತಜ್ಞತೆ ಸಲ್ಲಿಸಿ, ರಸ್ತೆ ಅಭಿವೃದ್ಧಿಗೂ ಅನುದಾನ ನೀಡುವಂತೆ ಮನವಿ ಮಾಡಿದರು. ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಮೇಗೌಡ, ಮುಖಂಡ ಗಾಳೇಗೌಡ, ಶೇಖರ್, ಬಸವರಾಜು, ನರಿಗುಡ್ಡೇನಹಳ್ಳಿಯ ರಂಗನಾಥ್, ಅಜಯ್, ಮೋಹನ್, ಸಿದ್ದೇಗೌಡ, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ, ಸುರೇಖಾ ರಾಜ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.