ಚಿಕ್ಕಮಗಳೂರು

ತಗ್ಗಿದ ನದಿ ನೀರಿನ ಮಟ್ಟ

Published On :

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲುಸೀಮೆಯಲ್ಲೂ ಸೋಮವಾರ ಮಳೆ ಅಲ್ಪಪ್ರಮಾಣದಲ್ಲಿ ಇಳಿಮುಖವಾಗಿದ್ದು, ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟ ಕಡಿಮೆಯಾಗಿದೆ.
ಕಳೆದ 24 ಗಂಟೆ ಕಾಲ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಕೆಲವೆಡೆ ರಸ್ತೆ ಸಂಪರ್ಕ ಕಡಿದು ಹೋಗಿತ್ತು. ಮಳೆ ಇಳಿಮುಖವಾಗಿದ್ದರಿಂದ ನೀರಿನ ಮಟ್ಟ ತಗ್ಗಿದೆ. ಆದರೆ, ಬಲವಾಗಿ ಗಾಳಿ ಬೀಸುತ್ತಿರುವುದರಿಂದ ಮಲೆನಾಡಿನ ಹಲವೆಡೆ ಮರಗಳು ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಾಯ ಉಂಟಾಗಿದ್ದು, ಪ್ರಮುಖವಾಗಿ ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ಗ್ರಾಮಾಂತರ  ಪ್ರದೇಶಗಳಲ್ಲಿ ಈ ಸಮಸ್ಯೆ ಎದುರಾಗಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಹಾಗೂ ಎನ್.ಆರ್.ಪುರ ತಾಲೂಕುಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು, ಇನ್ನುಳಿದಂತೆ ತರೀಕೆರೆ ಹಾಗೂ ಕಡೂರು ತಾಲೂಕುಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಆಗಾಗ ತುಂತುರು ಮಳೆ ಬಂದು ಹೋಗುತ್ತಿತ್ತು.
ಕಮ್ಮರಡಿಯಲ್ಲಿ ಅತಿ ಹೆಚ್ಚು ಮಳೆ: ಕಳೆದ 24 ಗಂಟೆಗಳಲ್ಲಿ ಕೊಪ್ಪ ತಾಲೂಕಿನ ಕಮ್ಮರಡಿಯಲ್ಲಿ ಅತಿ ಹೆಚ್ಚು ಮಳೆ ಬಿದ್ದಿದೆ. ಅಂದರೆ, 197.7 ಮಿ.ಮೀ. ಮಳೆಯಾಗಿದೆ. ಇನ್ನುಳಿದಂತೆ ಚಿಕ್ಕಮಗಳೂರು ನಗರ- 6.4, ವಸ್ತಾರೆ- 20, ಜೋಳ್ದಾಳ್- 21, ಆಲ್ದೂರು- 36.8, ಅತ್ತಿಗುಂಡಿ- 44.5, ಸಂಗಮೇಶ್ವರಪೇಟೆ- 57, ಬ್ಯಾರವಳ್ಳಿ- 49.2, ಕಡೂರು- 9.5,  ಸಿಂಗಟಗೆರೆ- 5.8, ಸಖರಾಯಪಟ್ಟಣ- 14.4, ಬೀರೂರು- 5.6, ಕೊಪ್ಪ- 150.2, ಹರಿಹರಪುರ- 185.4, ಜಯಪುರ- 124.2, ಬಸರೀಕಟ್ಟೆ- 107.8, ಮೂಡಿಗೆರೆ- 83.4, ಕೊಟ್ಟಿಗೆಹಾರ- 89.6, ಜಾವಳಿ- 100, ಕಳಸ- 91.4, ಶೃಂಗೇರಿ- 149, ಕಿಗ್ಗಾ- 178, ಕೆರೆಕಟ್ಟೆ- 189, ತರೀಕೆರೆ- 14, ಲಕ್ಕವಳ್ಳಿ- 24.6, ಅಜ್ಜಂಪುರ- 4.2, ತಣಿಗೇಬೈಲು- 31, ರಂಗೇನಹಳ್ಳಿಯಲ್ಲಿ 19.8 ಮಿ.ಮೀ. ಮಳೆ ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.