ಚಿಕ್ಕಮಗಳೂರು

ಅಕ್ರಮ ಕಟ್ಟಡ ತೆರವಿಗೆ ಆಗ್ರಹಿಸಿ ದೂರು

Published On :

ತರೀಕೆರೆ:  ಪಟ್ಟಣದ ನೀರು ಶುದ್ಧೀಕರಣ ಕೇಂದ್ರದ ಪಕ್ಕದಲ್ಲಿ ರೋಟರಿ ಸಂಸ್ಥೆ ಆಕ್ರಮಿಸಿರುವ ಕಟ್ಟಡ ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳದ ಪುರಸಭೆ ವಿರುದ್ಧ, ಮಾಜಿ ಶಾಸಕ ಬಿ.ಆರ್.ನೀಲಕಂಠಪ್ಪ ನೇತೃತ್ವದಲ್ಲಿ  ಲೋಕಾಯುಕ್ತ ಡಿವೈಎಸ್ಪಿ ಶೇಖ್ ಹುಸೇನ್ ಅವರಿಗೆ ದೂರು ಸಲ್ಲಿಸಿದರು.
ನೀರು ಶುದ್ಧೀಕರಣ ಕೇಂದ್ರದ ಪಕ್ಕದ ಈ ಕಟ್ಟಡದ ಜಾಗವು 4ನೇ ಹಂತದ ನೀರು ಸರಬರಾಜು ಯೋಜನೆಗೆ ಸೂಕ್ತವಾಗಿದೆ. ಇಲ್ಲಿನ ನೀರು ಶುದ್ಧೀಕರಣ ಘಟಕ ಸ್ಥಾಪನೆಯಿಂದ ಪುರಸಭೆಯ ವೆಚ್ಚ ಸಹ ಕಡಿಮೆ ಮಾಡಬಹುದಾಗಿದೆ. ಕಾನೂನಿನ ರೀತ್ಯಾ ರೋಟರಿ ಸಂಸ್ಥೆ ಆಕ್ರಮಿಸಿರುವ ಜಾಗವನ್ನು ತೆರವುಗೊಳಿಸಿ ಪುರಸಭೆಗೆ ವಹಿಸಿಕೊಡುವಂತೆ ಆದೇಶಿಸಲು ಪತ್ರದಲ್ಲಿ ಒತ್ತಾಯಿಸಲಾಗಿದೆ.
ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿಎಚ್ಎಲ್ ರಮೇಶ್ ಮಾತನಾಡಿದರು. ಮ್ಯಾಮ್ಕೋಸ್ ನಿರ್ದೇಶಕ ಆರ್.ದೇವಾನಂದ್ ಅವರು ಮಾತನಾಡಿದರು. ತಾಲೂಕು ನಾಗರೀಕ ಹೋರಾಟ ಸಮಿತಿ ಪದಾಧಿಕಾರಿಗಳು, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಎಚ್.ಎಲ್.ರಮೇಶ್, ಮ್ಯಾಮ್ಕೋಸ್ ನಿರ್ದೇಶಕ ಆರ್.ದೇವಾನಂದ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಸುರೇಶ್ ಚಂದ್ರ, ಮಾಜಿ ಪುರಸಭಾಧ್ಯಕ್ಷ ಟಿ.ಆರ್.ನಾಗರಾಜ್, ಜಯ್ಯಣ್ಣ ಮತ್ತಿತರರು ಇದ್ದರು. ಮಾಜಿ ಶಾಸಕ ಬಿ.ಆರ್. ನೀಲಕಂಠಪ್ಪ ಮಾತನಾಡಿದರು. ಮನವಿ ಸ್ವೀಕರಿಸಿದ ಡಿವೈಎಸ್ಪಿ ಶೇಖ್ ಹುಸೇನ್ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.