ಚಿಕ್ಕಮಗಳೂರು

ಗ್ರಾಮೀಣ ಕುಶಲಕರ್ಮಿಗಳಿಗೂ ನಬಾರ್ಡ್ ಹಲವು ಯೋಜನೆ

Published On :

ತರೀಕೆರೆ:  ನಬಾರ್ಡ್ ಅನೇಕ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸುತ್ತಿದೆ ಎಂದು ನವಾರ್ಡ್‌ನ ಜಿಲ್ಲಾ ಯೋಜನಾಧಿಕಾರಿ ಅನುರಾಧ ನರಹರಿ ತಿಳಿಸಿದ್ದಾರೆ.
 ಪಟ್ಟಣದಲ್ಲಿ ಚಿಕ್ಕಮಗಳೂರು ಮಹಿಳಾ ಸಹಕಾರ ಶಿಕ್ಷಣ ಅಭಿವೃದ್ಧಿ ಯೋಜನೆ, ಭಾರತೀಯ ಸಹಕಾರಿ ಯೂನಿಯನ್ ವತಿಯಿಂದ ಮಹಿಳೆಯರಿಗಾಗಿ 13 ದಿನಗಳ ಕರಕುಶಲ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ನಬಾರ್ಡ್ ಗ್ರಾಮೀಣ ಪ್ರದೇಶದ ರೈತರಿಗೆ ನೀಡುವ ಪ್ರಾಮುಖ್ಯತೆ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೂ ನೀಡುತ್ತಿದ್ದು ಅವರಿಗಾಗಿ ಅನೇಕ ಯೋಜನೆ ರೂಪಿಸಿ ಕಾರ್ಯಗತಗೊಳಿಸುತ್ತಿದೆ ಎಂದು ತಿಳಿಸಿದರು. ಕಡೂರು ಮತ್ತು ತರೀಕೆರೆ ತಾಲೂಕಿನಲ್ಲಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿರುವ ಹಿನ್ನಲೆಯಲ್ಲಿ ಜಲಾನಯನ ಇಲಾಖೆ ಮೂಲಕ ಅಂತರ್ಜಲ ಅಭಿವೃದ್ಧಿಗೆ ನಬಾರ್ಡ್ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.
ಚಿಕ್ಕಿ ಚಿಕ್ಕ ಯೋಜನೆಗಳಿಗೆ ಆರ್ಥಿಕ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ನಬಾರ್ಡ್ ರಾಜ್ಯದಲ್ಲಿ ಹೆಚ್ಚು ಪ್ರಗತಿ ಸಾಧಿಸುತ್ತಿದೆ ಎಂದು ಅವರು ತಿಳಿಸಿದರು.
ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿ ದೊರೈರಾಜ್ ಅವರು ಮಾತನಾಡಿ ಮಹಿಳೆಯರು ತಾವು ಕಲಿತ ಕೌಶಲ್ಯದಿಂದ, ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಅಗತ್ಯ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಿ ಆರ್ಥಿಕ ಸಬಲತೆ ಹೊಂದಬೇಕು ಎಂದು ತಿಳಿಸಿದರು.
ಚಿಕ್ಕಮಗಳೂರು ಮಹಿಳಾ ಶಿಕ್ಷಣ ಅಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಎ.ಜಿ.ಅನಿತಾ ಅವರು ಮಾತನಾಡಿದರು. ದೇವರಾಜ್, ಶಿಕ್ಷಕಿ ಶಿವಕುಮಾರಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.