ಚಿಕ್ಕಮಗಳೂರು

ನೀರಿನಲ್ಲೂ ರಾಜಕಾರಣ ಸಲ್ಲ: ಸಗೀರ್ ಅಹಮ್ಮದ್

Published On :

ಚಿಕ್ಕಮಗಳೂರು: ನೀರಿನ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮಾಜಿ ಸಚಿವ ಸಿ.ಆರ್. ಸಗೀರ್ ಅಹಮ್ಮದ್ ಹೇಳಿದರು.
ಕರಗಡ ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ನಡೆಸುತ್ತಿರುವ ಸರಣಿ ಧರಣಿಯಲ್ಲಿ ಗುರುವಾರ ಮಾತನಾಡಿದರು.
ಕರಗಡ ಯೋಜನೆಗೆ ನೂರಾರು ಕೋಟಿ ರುಪಾಯಿ ಅವಶ್ಯಕತೆ ಇಲ್ಲ. ಕೇವಲ ರು. 20 ಕೋಟಿಯಲ್ಲಿ  ಈ ಯೋಜನೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು.
ಕಳೆದ 30 ವರ್ಷಗಳಿಂದಲೂ ಈ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಆ ಪ್ರದೇಶದಲ್ಲಿ ಜನ ಮತ್ತು ಜಾನುವಾರುಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ರಾಜ್ಯದಲ್ಲಿ ಈವರೆಗೆ ಬಂದು ಹೋಗಿರುವ ಸರ್ಕಾರಗಳು  ಮನಸ್ಸು ಮಾಡಿದ್ದರೆ ಈ ಯೋಜನೆ ಈಗಾಗಲೇ ಪೂರ್ಣಗೊಳ್ಳುತ್ತಿತ್ತು. ಕುಡಿಯುವ ನೀರಿನಲ್ಲಿ ರಾಜಕಾರಣ ಮಾಡಬಾರದು. ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಈಗಿನ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ರಾಜು ಮಾತನಾಡಿದರು. ಗುರುವಾರದ ಧರಣಿಯಲ್ಲಿ ಮಾಚೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಗ್ರಾಮಸ್ಥರು ಪಾಲ್ಗೊಂಡಿದ್ದರು. ಶುಕ್ರವಾರ ಕಳಸಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಲಾ, ಕಾಲೇಜು, ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಪ್ರತಿಭಟನೆ ನಡೆಯಲಿದೆ.


ಬೆಳವಾಡಿ ಸುತ್ತಮುತ್ತಲ ಗ್ರಾಮಗಳಿಗೆ ನೀರು ಹರಿಸಬೇಕೆಂಬುದು ಇತ್ತೀಚಿನ ಬೇಡಿಕೆ ಅಲ್ಲ. ಮಲ್ಲಿಕಾರ್ಜುನ ಪ್ರಸನ್ನ ಅವರು ಸಚಿವರಾಗಿದ್ದ ಕಾಲದಲ್ಲಿ ಈ ಯೋಜನೆ ಜಾರಿಗೆ ಬಂದಿತು. ಕಳೆದ 30 ವರ್ಷಗಳಿಂದಲೂ ಈ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಆ ಪ್ರದೇಶದಲ್ಲಿ ಜನ ಮತ್ತು ಜಾನುವಾರುಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ರಾಜ್ಯದಲ್ಲಿ ಈವರೆಗೆ ಬಂದು ಹೋಗಿರುವ ಸರ್ಕಾರಗಳು  ಮನಸ್ಸು ಮಾಡಿದ್ದರೆ ಈ ಯೋಜನೆ ಈಗಾಗಲೇ ಪೂರ್ಣಗೊಳ್ಳುತ್ತಿತ್ತು.
ಟಿ ಸಿ.ಆರ್. ಸಗೀರ್ ಅಹಮ್ಮದ್, ಮಾಜಿ ಸಚಿವ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.