ಪ್ರೌಢಶಾಲೆಗೆ ಕಂಪ್ಯೂಟರ್ ಹಸ್ತಾಂತರ
ಬಾಳೆಹೊನ್ನೂರು: ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಅಗತ್ಯವಾಗಿ ಇರಬೇಕು ಎಂದು ರಂಭಾಪುರೀ ಸ್ವಾಮೀಜಿ ಹೇಳಿದ್ದಾರೆ.
ಇಲ್ಲಿನ ರಂಭಾಪುರೀ ಪೀಠದಲ್ಲಿ ಹಳೇ ವಿದ್ಯಾರ್ಥಿ ಸಂಘದಿಂದ ರುದ್ರಮುನೀಶ್ವರ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ವಿತರಣಾ ನೀಡಿಕೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದು ಎಲ್ಲಾ ಉದ್ಯೋಗ ರಂಗಗಳಲ್ಲೂ ಕಂಪ್ಯೂಟರ್ ಜ್ಞಾನ ಅಗತ್ಯವಾಗಿದ್ದು, ಕಂಪ್ಯೂಟರ್ ಅರ್ಹತೆಯನ್ನೇ ಮೊದಲು ಕೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರಾಥಮಿಕ, ಪ್ರೌಢಶಿಕ್ಷಣದ ಹಂತದಲ್ಲಿಯೇ ಕಂಪ್ಯೂಟರ್ ಶಿಕ್ಷಣ ಪಡೆದು, ಉದ್ಯೋಗ ರಂಗದಲ್ಲಿ ಸಾಧನೆ ಮಾಡಬೇಕು ಎಂದರು.
ಜಗದ್ಗುರು ರೇಣುಕಾಚಾರ್ಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಮಾತನಾಡಿ, ಕಲಿತ ಶಾಲೆಗೆ ಕಿಂಚಿತ್ತಾದರೂ ದೇಣಿಗೆ, ಸಹಾಯ ನೀಡಿದರೆ ಆ ಶಾಲೆಯಲ್ಲಿ ಪಡೆದ ಶಿಕ್ಷಣಕ್ಕೆ ಸಾರ್ಥಕ ಭಾವ ಸಿಗುತ್ತದೆ. ಆ ನಿಟ್ಟಿನಲ್ಲಿ ಪೀಠದ ಶಾಲೆಗೆ ಕಂಪ್ಯೂಟರ್ಗಳನ್ನು ನೀಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ಸಾಕಷ್ಟು ಸೇವೆ ಸಲ್ಲಿಸುವುದಾಗಿ ತಿಳಿಸಿದರು.
ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನೀಲರಾಜ್ ಭಂಡಾರಿ, ಖಜಾಂಚಿ ಚನ್ನವೀರ, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಮಲ್ಲಿಕಾರ್ಜುನ, ಸಂಘದ ಸಲಹಾ ಸಮಿತಿ ಸದಸ್ಯ ವೇದರಾಜ ಭಂಡಾರಿ, ಮುಖ್ಯ ಶಿಕ್ಷಕ ಪಿ.ಆರ್. ಸದಾನಂದ, ಕಟ್ಟೇಗೌಡ, ಕಂಪ್ಯೂಟರ್ ದಾನಿ ನೀಲಕಂಠ, ದ್ವಾರಕಶಾಸ್ತ್ರಿ, ಶಿವಪ್ರಸಾದ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

