ಚಿಕ್ಕಮಗಳೂರು

ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಸೇರಿಸಲು ಒತ್ತಾಯ

Published On :

ನರಸಿಂಹರಾಜಪುರ: ಕುದುರೆಗುಂಡಿ ಹಾಗೂ ತಾಲೂಕಿನ ಇತರೆ 10 ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಸನ ಹಾಲು ಒಕ್ಕೂಟ ವ್ಯಾಪ್ತಿಗೆ ಬರುವುದರಿಂದ ನಮ್ಮ ಸಂಘಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಕುದುರೆಗುಂಡಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷ ಕಡೇಗದ್ದೆ ಚಕ್ರಪಾಣಿ ಅಸಮಾಧಾನ ವ್ಯಕ್ತಪಡಿಸಿದರು.
ಕುದುರೆಗುಂಡಿ ಸಮುದಾಯ ಭವನದಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಾಸನ ಹಾಲು ಒಕ್ಕೂಟ ಇಲ್ಲಿಂದ 175 ಕಿ.ಮೀ.ದೂರ ಇದೆ.ಆದ್ದರಿಂದ ಇಲ್ಲಿನ ಹಾಲನ್ನು ಅವರು ಖರೀದಿ ಮಾಡದೆ ಅಲ್ಲಿನ ಹಾಲನ್ನು ಮಾತ್ರ ಇಲ್ಲಿ ಮಾರಾಟ ಮಾಡುತ್ತಿದ್ದಾರೆ. ನಮ್ಮ ಸಂಘಗಳು ಅತಂತ್ರ ಸ್ಥಿತಿಗೆ ತಲುಪಿದ್ದು ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಹಾಸನ ಹಾಲು ಒಕ್ಕೂಟದಿಂದ ನಮ್ಮನ್ನು ವಿಮುಕ್ತಿ ಗೊಳಿಸಿ ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿದರು.
ಶಿವಮೊಗ್ಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಬಿ.ಎಚ್.ರಮೇಶ್ ಮಾತನಾಡಿದರು. ಸಂಘದ ಕಾರ್ಯದರ್ಶಿ ಹರೀಶ್ ಭಟ್ ವಾರ್ಷಿಕ ವರದಿ ವಾಚಿಸಿದರು. ಉಪಾಧ್ಯಕ್ಷ ರಾಮಣ್ಣ ಭಂಡಾರಿ, ನಿರ್ದೇಶಕ ಜಿ.ಟಿ.ಸುಬ್ರಮಣ್ಯ, ಟಿ.ಎ.ರಮೇಶ್,ಬಿ.ಕೆ.ಜಯರಾಜ್, ಎಚ್.ಪಿ.ರತ್ನಾಕರಗೌಡ, ರೋಸಾ ಸುನೀಲ್, ಎನ್.ಕೆ.ರತ್ನಾಕರ,ಎನ್.ಕೃಷ್ಣ, ಗಾಯಿತ್ರಿ ಗಣೇಶ್, ಆಶಾ ಶೆಟ್ಟಿ,ಹಾಲು ಪರೀಕ್ಷಿಕ ಎನ್.ಕೃಷ್ಣ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.