ಚಿಕ್ಕಮಗಳೂರು

ಕನ್ನಡಿಗರ ಮೇಲಿನ ದೌರ್ಜನ್ಯಕ್ಕೆ ಖಂಡನೆ

Published On :

ಚಿಕ್ಕಮಗಳೂರು: ಗೋವಾದ ಬೈನಾ ಬೀಚ್‌ನಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ರಾಜ್ಯದಲ್ಲಿ ನಿರಂತರ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆನಡೆಸಿದರು.
ವೇದಿಕೆ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಮತ್ತು ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ರೇಣುಕಾ ಪರಮೇಶ್ ನೇತೃತ್ವದಲ್ಲಿ ಹಳೇ ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಹನುಮಂತಪ್ಪ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಗೋವಾದ ನಿರಾಶ್ರಿತ ಕನ್ನಡಿಗರಿಗೆ ರಕ್ಷಣೆ ನೀಡಬೇಕು. ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತೇಗೂರು ಜಗದೀಶ್, ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರು ಮಾನವೀಯತೆಯನ್ನು ಮರೆತು ಬೈನಾ ಬೀಚ್‌ನಲ್ಲಿ ವಾಸಿಸುತ್ತಿದ್ದ ಕನ್ನಡಿಗರಿಗೆ ಬದಲಿ ವ್ಯವಸ್ಥೆ ಕಲ್ಪಿಸದೇ ಒಕ್ಕಲೆಬ್ಬಿಸುವ ಮೂಲಕ ಅವರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದರು.
ಸೂರಿಗಾಗಿ ಒತ್ತಾಯಿಸಿ ಮಳೆಯ ನಡುವೆ ಪ್ರತಿಭಟನೆ ನಡೆಸುತ್ತಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಧಾವಿಸಬೇಕು. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಗೋವಾ ಮುಖ್ಯಮಂತ್ರಿಯನ್ನು ಉಚ್ಛಾಟಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿದರು.
ಗೋವಾ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗದಿದ್ದಲ್ಲಿ ರಾಜ್ಯಾದ್ಯಂತ ವೇದಿಕೆ ಕಾರ್ಯಕರ್ತರು ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.
ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ರೇಣುಕಾ ಪರಮೇಶ್ ಮಾತನಾಡಿ,ದರು.
ವೇದಿಕೆ ಜಿಲ್ಲಾ ಉಪಾಧ್ಯಕ್ಷ ಕೆಂಪನಹಳ್ಳಿ ಅಶೋಕ್, ಜಿಲ್ಲಾ ಕಾರ್ಯದರ್ಶಿ ಪಂಚಾಕ್ಷರಿ, ಸಂಘಟನಾ ಕಾರ್ಯದರ್ಶಿ ಕೋಟೆ ಮಲ್ಲೇಶ್, ಮೂಡಿಗೆರೆ ತಾ. ಅಧ್ಯಕ್ಷೆ ಹೇಮಾವತಿ, ಚಿಕ್ಕಮಗಳೂರು ತಾ. ಅಧ್ಯಕ್ಷೆ ನಾಗಲತ, ಪ್ರಧಾನ ಕಾರ್ಯದರ್ಶಿ ಸಿದ್ದೇಗೌಡ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.