ಚಿಕ್ಕಮಗಳೂರು

ಕಾಫಿ ಪಲ್ಪಿಂಗ್‌ನಿಂದ ಪರಿಸರ ಮಲಿನವಾಗದಿರಲಿ

Published On :

ಚಿಕ್ಕಮಗಳೂರು:  ಕಾಫಿ ಹಣ್ಣಿನ ಸಂಸ್ಕರಣೆಯ ಕಲುಷಿತ ನೀರಿನಿಂದ ಪರಿಸರ ಮಾಲಿನ್ಯ ಉಂಟಾಗದಂತೆ ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ. ನಗರದ ಟೌನ್ ಮಹಿಳಾ ಸಮಾಜದ ಸವೂರ್ ಹಾಲ್‌ನಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಶನಿವಾರ ಆಯೋಜಿಸಿದ್ದ ಕಾಫಿ ಫಲ್ಪಿಂಗ್ ಚಟುವಟಿಕೆಯಿಂದ ಜಲ ಮಾಲಿನ್ಯವಾಗುವುದನ್ನು ತಡೆಗಟ್ಟುವ ಬಗ್ಗೆ ಹಾಗೂ ಕಾಫಿ ಫಲ್ಪಿಂಗ್ ಘಟಕದಲ್ಲಿ ಡ್ರೈ ಪಲ್ಪರ್ ಎಕೋಪಲ್ಪರ್ ಅಳವಡಿಸುವ ಬಗ್ಗೆ ಜಾಗೃತಿ ಹಾಗೂ ತಾಂತ್ರಿಕ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ವಿಜಯಕುಮಾರ್ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯು ಉತ್ತಮ ಪ್ರಕೃತಿ ಸೌಂದರ್ಯವನ್ನು ಹೊಂದಿದ್ದು, ಇಲ್ಲಿನ ಪರಿಸರದ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ ಎಂದರು. ಜಿಲ್ಲೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಎಸ್ಟೇಟ್‌ಗಳಲ್ಲಿ ಕಾಫಿ ಸಂಸ್ಕರಣೆ ಘಟಕಗಳು ಇವೆ.
ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಡಾ. ಸಿ.ಎ. ಶ್ರೀನಿವಾಸ್‌ಮೂರ್ತಿ ಹಾಗೂ ಡಾ. ಎಸ್. ಭಾಸ್ಕರ್ ಉಪನ್ಯಾಸ ನೀಡಿದರು. ಎಲ್ಲಾ ಸಂಸ್ಕರಣಾ ಘಟಕಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರೊಂದಿಗೆ ಜಲ ಮಾಲಿನ್ಯವನ್ನು ತಡೆಗಟ್ಟಲು ಮುಂದಾಗಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಕರ್ನಾಟಕ ಕಾಫಿ ಬೆಳೆಗಾರರ ಅಧ್ಯಕ್ಷ ಬಿ.ಎಸ್. ಜಯರಾಮ್, ಕಾಫಿ ಮಂಡಳಿ ಸದಸ್ಯ ಎನ್.ಕೆ. ಪ್ರದೀಪ್, ಹಾಸನ ಕಾಫಿ ಬೆಳೆಗಾರರ ಅಧ್ಯಕ್ಷ ಕೃಷ್ಣಪ್ಪ, ಹಿರಿಯ ಪರಿಸರ ಅಧಿಕಾರಿ ಎನ್.ಲಕ್ಷ್ಮಣ್, ಕಾಫಿ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ರಘುರಾಮುಲು ಉಪಸ್ಥಿತರಿದ್ದರು. ಪರಿಸರ ಅಧಿಕಾರಿ ನಾರಾಯಣಸ್ವಾಮಿ ಸ್ವಾಗತಿಸಿ, ಕೆ.ವಿ.ಶಿವಕುಮಾರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.