ಜಿಲ್ಲೆಯ ರೈತರಿಗೆ ಹರ್ಷ ತಂದ ವರ್ಷ ಧಾರೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಮಳೆ ಶನಿವಾರ ಮತ್ತಷ್ಟು ಚುರುಕಾಗಿದ್ದು, ಶೃಂಗೇರಿ ತಾಲೂಕಿನ ಕೆರೆಕಟ್ಟೆಯಲ್ಲಿ ಅತಿ ಹೆಚ್ಚು ಅಂದರೆ 190.6 ಮಿ.ಮೀ. ಮಳೆ ಸುರಿದಿದೆ. ಮಳೆಯಿಂದಾಗಿ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಆದಿಯಮ್ಮ, ಕಮಲ ಹಾಗೂ ಕಿರುಗುಂದ ಗ್ರಾಮದ ರವಿ ಹಾಗೂ ಹುಚ್ಚಪ್ಪ ಎಂಬುವವರ ಮನೆಗಳಿಗೆ ಹಾನಿ ಸಂಭವಿಸಿದೆ. ಮಲೆನಾಡು ಸೇರಿದಂತೆ ಬಯಲುಸೀಮೆಯಲ್ಲೂ ಇಡೀ ದಿನ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಆಗಾಗ ಬಲವಾಗಿ ಬೀಸುತ್ತಿರುವ ಗಾಳಿಯಿಂದ ಥಂಡಿ ಗಾಳಿ ಮುಂದುವರೆದಿತ್ತು. ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಜಲಾಶಯಗಳ ಮಟ್ಟದಲ್ಲಿ ಏರಿಕೆ ಕಂಡು ಬರಲಿದೆ. ಜಿಲ್ಲೆಯ ಬಯಲುಸೀಮೆ ಪ್ರದೇಶದಲ್ಲಿ ರೈತರು ಮಳೆ ಅವಲಂಬಿಸಿದ್ದು, ಮಳೆಯಿಂದಾಗಿ ಬೆಳೆಗಳಿಗೆ ಅನುಕೂಲವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

