ಬಜೆಟ್ ಅಭಿವೃದ್ಧಿಗೆ ದಿಕ್ಸೂಚಿ: ಪ್ರೊ.ಬಿಎಂಕೆ
ಶಿಕಾರಿಪುರ: ಈ ಬಾರಿಯ ಬಜೆಟ್ನಲ್ಲಿ ಪ್ರಸಕ್ತ ಆದಾಯ-ವೆಚ್ಚದ ನಡುವಿನ ಕೊರತೆ ಸರಿದೂಗಿಸುವತ್ತ ಗಮನ ಹರಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ದೇಶದ ಅಭಿವೃದ್ಧಿಗೆ ಈ ಬಜೆಟ್ ಕಾರಣವಾಗಲಿದೆ ಎಂದು ಅರ್ಥಶಾಸ್ತ್ರಜ್ಞ, ಡಿವಿಎಸ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ.ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಕುವೆಂಪು ವಿವಿ ಅರ್ಥಶಾಸ್ತ್ರ ಉಪನ್ಯಾಸಕರ ಸಂಘ, ಲಯನ್ಸ್ನಿಂದ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಬಜೆಟ್ 2014-15 ರ ರಾಜ್ಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜನರಿಂದ ತೆರಿಗೆ ರೂಪದಲ್ಲಿ ಸಂಗ್ರಹಿಸುವ ಹಣದಲ್ಲಿ ಸರ್ಕಾರಿ ನೌಕರರ ವೇತನ, ಆಡಳಿತ ವೆಚ್ಚ, ರಕ್ಷಣೆ, ಸಹಾಯಧನ ಮತ್ತಿತರ ಯೋಜನೇತರ ವೆಚ್ಚಕ್ಕಾಗಿ ಶೇ.87 ಬಳಸಿಕೊಂಡು ಉಳಿದ ಶೇ.13 ರಲ್ಲಿ ಮಾತ್ರ ಉತ್ಪಾದನಾ ವಲಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದ ಅವರು ಬಜೆಟ್ನಲ್ಲಿ ಯೋಜನೇತರ ವೆಚ್ಚವನ್ನು ಕಡಿಮೆಗೊಳಿಸಿ ಉತ್ಪಾದನಾ ವಲಯಕ್ಕೆ ಹೆಚ್ಚು ಹಣ ವಿನಿಯೋಗಿಸಲು ಆದ್ಯತೆ ನೀಡಲಾಗಿದೆ ಎಂದು ವಿಶ್ಲೇಷಿಸಿದರು.
ಲೆಕ್ಕ ಪರಿಶೋಧಕ ಕೆ.ವಿ ವಸಂತಕುಮಾರ್ ಮಾತನಾಡಿ, ಬಜೆಟ್ನಲ್ಲಿ ತೆರಿಗೆ ಸರಳೀಕರಣಗೊಳಿಸಿ ಹೆಚ್ಚು ಕರ ಸಂಗ್ರಹಕ್ಕೆ ಆದ್ಯತೆ ನೀಡಲಾಗಿದೆ. ಸ್ವದೇಶಿ ಉದ್ದಿಮೆಗೆ ಬಂಡವಾಳ, ವೆಚ್ಚ ಕಡಿತಗೊಳಿಸುವುದು, ದೇಶಾದ್ಯಂತ ಏಕರೂಪದ ಕರ ಸಂಗ್ರಹಕ್ಕೆ ಆದ್ಯತೆ ನೀಡುವ ಭರವಸೆ ವಿತ್ತ ಸಚಿವರು ನೀಡಿದ್ದಾರೆ ಎಂದರು.
ಪ್ರಾಚಾರ್ಯ ಪ್ರೊ.ನಾಗೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿವಿ ಅರ್ಥಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರೊ.ಸತ್ಯನಾರಾಯಣ್, ಅಶ್ವಿನಿ ಬಿದರಳ್ಳಿ, ನೇತ್ರಾವತಿ, ಸೀಮಾ, ಕುಮದ್ವತಿ, ಗೀತಾ, ತೀರ್ಥಲಿಂಗಪ್ಪ, ಮಮತಾ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

