ಅಂಗನವಾಡಿ ಕಾರ್ಯಕರ್ತೆ ಮಕ್ಕಳಿಗೆ ಎರಡನೇ ತಾಯಿ: ಶಾಸಕ ಜೀವರಾಜ್
ನರಸಿಂಹರಾಜಪುರ: ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಮಕ್ಕಳಿಗೆ ಎರಡನೇ ತಾಯಿ ಇದ್ದಂತೆ. ಅವರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಶಾಸಕ ಡಿ.ಎನ್.ಜೀವರಾಜ್ ತಿಳಿಸಿದರು.
ಶನಿವಾರ ಅಂಬೇಡ್ಕರ್ ಭವನದಲ್ಲಿ ಶಿಶು ಅಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ನಡೆದ ಮಹಿಳೆಯರ ಮತ್ತು ಮಕ್ಕಳ ಸಾಗಣೆ ನಿರ್ಮೂಲನೆ ಅಂದೋಲನ ಕಾರ್ಯಕ್ರಮ ಮತ್ತು ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ. 33 ಕ್ಕಿಂತ ಹೆಚ್ಚು ಮೀಸಲಾತಿ ಸಿಕ್ಕಿದ್ದರೂ ಮಹಿಳೆಯರಿಗೆ ರಕ್ಷಣೆ ಮಾತ್ರ ಇಲ್ಲ ಎಂಬುದು ವಿಷಾದದ ಸಂಗತಿ. ರಾಜ್ಯದ ಎಲ್ಲಡೆ ಅತ್ಯಾಚಾರ ನಡೆಯುತ್ತಿರುವ ಈ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಕೆಲ ಮಹಿಳೆಯರೇ ಧ್ವನಿ ಎತ್ತುತ್ತಿಲ್ಲ ಎಂದರು.
ಭಾಗ್ಯಲಕ್ಷ್ಮಿ ಬಾಂಡ್ ನೀಡಲು ವಿಳಂಬ: ಬಿಜೆಪಿ ಸರ್ಕಾರ ಇದ್ದಾಗ ಭಾಗ್ಯಲಕ್ಷ್ಮಿ ಬಾಂಡ್ ನಮ್ಮ ಪಕ್ಷದ ಕನಸಿನ ಕಾರ್ಯಕ್ರಮವಾಗಿತ್ತು. ಈಗ ರಾಜ್ಯದಲ್ಲಿ ಮಹಿಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರೂ ಭಾಗ್ಯಲಕ್ಷ್ಮಿ ಬಾಂಡ್ ನೀಡಲು ವಿಳಂಬ ಮಾಡುತ್ತಿದ್ದಾರೆ. ಬಾಂಡ್ ನೀಡಬೇಕಾದರೆ ರಿಜಿಸ್ಟರ್ ಕಡ್ಡಾಯ ಎನುತ್ತಿದ್ದಾರೆ. ಇದರಿಂದ ಬಡವರಿಗೆ ತೊಂದರೆಯಾಗುತ್ತಿದ್ದು, ಇದನು ನಾನು ವಿರೋಧಿಸುತ್ತೇನೆ. ಈ ಸರ್ಕಾರದ ನೀತಿಯೇ ನನಗೆ ಅರ್ಥವಾಗುತ್ತಿಲ್ಲ ಎಂದು ಟೀಕಿಸಿದರು.
ಸರ್ಕಾರದ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕೆ.ಉಮೇಶ್ ಉಪನ್ಯಾಸ ನೀಡಿ, 1971 ರಲ್ಲಿ ಅನೈತಿಕ ವ್ಯವಹಾರಗಳ ನಿಗ್ರಹ ಕಾಯ್ದೆ ಬಂದಿದ್ದರೂ ಅನೈತಿಕ ಚಟುವಟಿಕೆ ಮುಂದುವರಿಯುತ್ತಿದೆ. ಮನುಷ್ಯ ಪ್ರಾಣಿಯಂತೆ ವರ್ತಿಸುತ್ತಿದ್ದಾನೆ ಎಂದರು.
ಸಿಡಿಪಿಓ ಜ್ಯೋತಿಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಪಂಚಾಯ್ತಿ ಅಧ್ಯಕ್ಷೆ ಸುಂದರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶಿವಣ್ಣ, ಸುಜಾತಾ, ತಾಪಂ ಸದಸ್ಯ ಜೆ.ಜಿ.ನಾಗರಾಜ್, ತಾ.ಕೃಷಿಕ ಸಮಾಜದ ಅಧ್ಯಕ್ಷ ನೀಲೇಶ್, ಪಪಂ್ತ ಸದಸ್ಯೆ ಸಮೀರಾ ನಹೀಂ ಉಪಸ್ಥಿತರಿದ್ದರು. ನಿವೃತ್ತಿಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ಕೆ.ಅಣ್ಣಪ್ಪ ಅವರನು ಬೀಳ್ಕೊಡಲಾಯಿತು. ಡಾಕಮ್ಮ ಪ್ರಾರ್ಥಿಸಿದರು. ಕಾವ್ಯಾ ನಿರೂಪಿಸಿದರು. ಇದಕ್ಕೂ ಮೊದಲು ಬಸ್ಸು ನಿಲ್ದಾಣದ ಆವರಣದಿಂದ ಅಂಬೇಡ್ಕರ್ ಭವನದವರೆಗೆ ಕಾರ್ಯಕರ್ತೆಯರು, ಸಹಾಯಕಿಯರು ಜಾಥಾ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

